ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಹೊರಟವರಿಗೆ ಗುಡ್ ನ್ಯೂಸ್: ಇಲ್ಲಿದೆ ವಿವರ

Krishnaveni K

ಮಂಗಳವಾರ, 5 ನವೆಂಬರ್ 2024 (10:19 IST)
ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಿದ್ದು, ಅನೇಕ ರೇಷನ್ ಕಾರ್ಡ್ ಗಳು ರದ್ದಾಗಿವೆ. ಇದರ ಬೆನ್ನಲ್ಲೇ ಈಗ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಸದ್ಯದಲ್ಲೇ ಅವಕಾಶ ಸಿಗಲಿದೆ.

 
ಬಿಪಿಎಲ್-ಎಪಿಎಲ್ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುವವರಿಗೆ ಸದ್ಯದಲ್ಲೇ ಗುಡ್ ನ್ಯೂಸ್ ಸಿಗಲಿದೆ. ಕರ್ನಾಟಕದ ಎಲ್ಲಾ ಖಾಯಂ ನಿವಾಸಿಗಳು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು. ಮಾನದಂಡಗಳಿಗೆ ಅನುಸಾರವಾಗಿ ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದಾಗಿದೆ.

ಎಲ್ಲಿ ಅರ್ಜಿ ಸಲ್ಲಿಸಬೇಕು?
ಕರ್ನಾಟಕದ ನಿವಾಸಿಗಳು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಆಹಾರ ಇಲಾಖೆಯ ಕಚೇರಿಗೇ ತೆರಳಬೇಕೆಂದಿಲ್ಲ. ವೆಬ್ ಸೈಟ್ ಮುಖಾಂತರ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದಾಗಿದೆ. Ahara.kar.nic.in ಎಂಬ ವೆಬ್ ಸೈಟ್ ನಲ್ಲಿ ಅರ್ಹ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಇ-ಪಡಿತರ ಚೀಟಿ ಪಡೆದುಕೊಳ್ಳಬಹುದು ಮತ್ತು ನಿಮ್ಮ ಪಡಿತರ ಚೀಟಿಯ ಸ್ಥಿತಿ-ಗತಿಯನ್ನು ಪರಿಶೀಲಿಸಬಹುದಾಗಿದೆ.

ಅಗತ್ಯ ದಾಖಲೆಗಳು
ಆಧಾರ್ ಕಾರ್ಡ್
ಇಮೇಲ್ ಐಡಿ
ಮೊಬೈಲ್ ಸಂಖ್ಯೆ
ವಿದ್ಯುತ್ ಬಿಲ್
ಪ್ಯಾನ್ ಕಾರ್ಡ್

ಈ ಮೇಲಿನ ದಾಖಲೆಗಳೊಂದಿಗೆ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ 15 ದಿನಗಳ ನಂತರ ನಿಮ್ಮ ಪಡಿತರ ಚೀಟಿಯನ್ನು ಹಾಜರುಪಡಿಸಲಾಗುತ್ತದೆ. ಇದಕ್ಕೆ 100 ರೂ. ಶುಲ್ಕ ಪಾವತಿಸಿ ಪಡೆಯಬಹುದು. ಪಡಿತರ ಚೀಟಿ ಕುರಿತ ಯಾವುದೇ ಅನುಮಾನಗಳಿಗೆ ಆಹಾರ ಇಲಾಖೆಯ ಟೋಲ್ ಫ್ರೀ ನಂಬರ್ 18004259339 ಅಥವಾ ಸಹಾಯವಾಣಿ 1967 ಎಂಬ ಸಂಖ್ಯೆಗೆ ಕರೆ ಮಾಡಬಹುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ