ಪ್ರವಾಸಿಗರಿಗೆ ಗುಡ್‌ನ್ಯೂಸ್‌, ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿಗೆ ಚಾಲನೆ

Sampriya

ಗುರುವಾರ, 27 ಜೂನ್ 2024 (19:25 IST)
Photo Courtesy X
ಬೆಂಗಳೂರು: ದಕ್ಷಿಣ ಭಾರತದಲ್ಲಿ ಪ್ರಥಮ ಹಗೂ ದೇಶದಲ್ಲಿಯೇ ಅತಿ ದೊಡ್ಡ ಚಿರತೆ ಸಫಾರಿಗೆ ಬನ್ನೇರುಘಟ್ಟ ಉದ್ಯಾನದಲ್ಲಿ ಇಂದು ಚಾಲನೆ ನೀಡಲಾಯಿತು.

ಹುಲಿ ಸಫಾರಿ, ಸಸ್ಯಾಹಾರಿ ಪ್ರಾಣಿಗಳ ಸಫಾರಿ, ಸಿಂಹ ಸಫಾರಿ, ಕರಡಿ ಸಫಾರಿ ಇರುವ ಬನ್ನೇರುಘಟ್ಟ ಉದ್ಯಾನದಲ್ಲಿ ಇದೀಗ ಹೊಸದೆಂಬಂತೆ ಚಿರತೆ ಸಫಾರಿಗೆ ಚಾಲನೆ ನೀಡುವ ಮೂಲಕ ಪ್ರವಾಸಿಗರಿಗೆ ಸಿಹಿ ಸುದ್ದಿ ನೀಡಿದೆ.

ಈ ಬಗ್ಗೆ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಬನ್ನೇರುಘಟ್ಟ ಉದ್ಯಾನದಲ್ಲಿ ಚಿರತೆ ಸಫಾರಿ ಮತ್ತೊಂದು ಆಕರ್ಷಣೆಯಾಗಿದ್ದು, ಮುಂದಿನ ದಿನಗಳಲ್ಲಿ  ಪ್ರವಾಸಿಗರು ಮತ್ತು ಸಂದರ್ಶಕರನ್ನು ಸೆಳೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬನ್ನೇರುಘಟ್ಟ ಸುತ್ತ ಮುತ್ತ ಬೆಟ್ಟಗುಡ್ಡಗಳಿದ್ದು, ಇದು ಚಿರತೆಗಳು ವಾಸಿಸಲು ಉತ್ತಮ ತಾಣವಾಗಿದೆ. ಆದ್ದರಿಂದ ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಚಿರತೆಗಳು ಕಾರಣಸಿಗುತ್ತದೆ. ಈ ಪೈಕಿ ಹೊಲ, ಗದ್ದೆಗಳಲ್ಲಿ ಹೆಣ್ಣು ಚಿರತೆಗಳು ಮರಿ ಹಾಕಿ ಹೋಗುವ ಸಂದರ್ಭದಲ್ಲಿ ಅಂತಹ ಮರಿಗಳನ್ನು ತಂದು ಉದ್ಯಾನದಲ್ಲಿ ಪಾಲನೆ ಮಾಡಲಾಗುತ್ತದೆ. ಪ್ರಸ್ತುತ ಉದ್ಯಾನದಲ್ಲಿ 14 ಚಿರತೆಗಳಿವೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ