ಬೆಂಗಳೂರು – ಹೊನ್ನಾವರ ವಾಹನ ಸವಾರರಿಗೆ ಗುಡ್ ನ್ಯೂಸ್ ಏನು ಗೊತ್ತಾ?
ಬೆಂಗಳೂರು -ಹೊನ್ನಾವರ ವಾಹನ ಸವಾರರಿಗೆ ಸಿಹಿಸುದ್ದಿ ಬಂದಿದೆ.
ಸುಮಾರು 2032 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು -ಹೊನ್ನಾವರ ರಸ್ತೆ ಅಗಲೀಕರಣ ನಡೆಯಲಿದೆ. ದ್ವಿಪಥದಿಂದ ಚತುಷ್ಪತದ ಮೇಲ್ದರ್ಜೆಗೆ ಏರಲಿದೆ ಎಂದು ತುಮಕೂರು ಸಂಸದ ಮುದ್ದಹನುಮೆಗೌಡ ಹೇಳಿದ್ದಾರೆ.
ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ ಅಧಿಕೃತ ಕಾಮಗಾರಿಗೆ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಕ್ರಾಸ್ ಬಳಿ ಕಾಮಗಾರಿಗೆ ಚಾಲನೆ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. ತುಮಕೂರಿನಿಂದ ಶಿವಮೊಗ್ಗದ ವರೆಗೆ ಒಟ್ಟು ಮೂರು ಹಂತದಲ್ಲಿ ರಸ್ತೆ ಅಗಲೀಕರಣ ಕೆಲಸ ನಡೆಯಲಿದೆ. ಅಲ್ಲದೇ ಟೋಲ್ ಸಂಗ್ರಹಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.