ಗೃಹಲಕ್ಷ್ಮೀಯರಿಗಾಗಿ ಬಿಬಿಎಂಪಿಯಿಂದ ಗುಡ್ ನ್ಯೂಸ್

ಗುರುವಾರ, 27 ಜುಲೈ 2023 (18:00 IST)
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಸರ್ವರ್ ಸಮಸ್ಯೆ ಕಾಡುತ್ತಿದೆ. ಅಲ್ಲದೇ ಅರ್ಹ ಫಲಾನುಭವಿಗಳಿಗೆ ಗೃಹಲಕ್ಷ್ಮೀ ತಲುಪಿಸುವ ನಿಟ್ಟಿನಲ್ಲಿ ಬಿಬಿಎಂಪಿ ಹೊಸ ಪ್ಲಾನ್ ಗೆ ಮುಂದಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮೀ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ 198 ವಾರ್ಡ್ ಕಛೇರಿಗಳಲ್ಲಿ ನೊಂದಣಿಗಾಗಿ ಅವಕಾಶ ಮಾಡಿಕೊಡುತ್ತಿದೆ.ಬಿಬಿಎಂಪಿಯ 198 ವಾರ್ಡ್ ಗಳಲ್ಲಿ ಸ್ಥಾಪಿಸುವ ಸಹಾಯ ಕೇಂದ್ರಗಳಲ್ಲಿ ಅರ್ಹ ಫಲಾನುಭವಿಗಳು ತೆರಳಿ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ನೊಂದಾಯಿಸಿ ಫಲಾನುಭವಿಗಳಿಗೆ ಮಂಜುರಾತಿ ಪತ್ರವನ್ನು ನೀಡುವ ಸಲುವಾಗಿ ಸಿಬ್ಬಂದಿಗೆ ಸರಿಯಾದ ತರಬೇತಿಯನ್ನು ನೀಡಲು ರೆಡಿಯಾಗಿದೆ. ಅದಕ್ಕೆ ಬೇಕಾದಂತಹ ಸೌಲಭ್ಯಗಳನ್ನು ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರತಿ ವಾರ್ಡ್ ಕಛೇರಿ ಮುಂಭಾಗವೂ ಗೃಹ ಲಕ್ಷ್ಮೀ ನೋಂದಣಿ ಕೇಂದ್ರ ಎಂಬ ಬ್ಯಾನರ್ ಅನ್ನು ಅಳವಡಿಸುವಂತೆ ತಿಳಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಡಿಯೋ, ವೀಡಿಯೋ ಕ್ಲಿಪ್ಸ್ ಪಡೆದು ಸಿಲಿಕಾನ್ ಸಿಟಿಯ ಜನನಿಬಿಡಿದ ಪ್ರದೇಶ, ಕೊಳಗೇರಿ ಪ್ರದೇಶಗಳಲ್ಲಿ ಹೆಚ್ಚಿನ ಪ್ರಚಾರ ನೀಡಿ ಎಲ್ಲಾ ಫಲಾನುಭವಿಗಳು ನೋಂದಣಿ ಮಾಡಿಕೊಳ್ಳುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ