ಯುಗಾದಿ ಹಬ್ಬಕ್ಕೆ ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ಸಿಎಂರಿಂದ ಗುಡ್‌ನ್ಯೂಸ್‌

Sampriya

ಭಾನುವಾರ, 30 ಮಾರ್ಚ್ 2025 (18:35 IST)
ಬೆಂಗಳೂರು: ಯುಗಾದಿ ಹಬ್ಬದ ಹಿನ್ನೆಲೆ ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಸಿಎಂ ಸಿದ್ದರಾಮಯ್ಯ ಅವರು ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸುವುದಾಗಿ ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ.

ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ ಎಂದು ಹೇಳಿದರು.

ಮಾರ್ಚ್ 30ರಂದು ಭದ್ರಾ ಜಲಾಶಯದಲ್ಲಿ 28 ಟಿಎಂಸಿ ನೀರು ಸಂಗ್ರಹ ಲಭ್ಯವಿದೆ. ಇದರಲ್ಲಿ ಮೇ 8ರವರೆಗೆ ನೀರಾವರಿಗೆ 11 ಟಿಎಂಸಿ ಮತ್ತು ಕುಡಿಯುವ ನೀರಿಗಾಗಿ 14 ಟಿಎಂಸಿ ಅಗತ್ಯವಿದ್ದು, 3 ಟಿಎಂಸಿ ನೀರು ಜಲಾಶಯದಲ್ಲಿ ಉಳಿಸಿಕೊಳ್ಳಬೇಕಾಗಿದೆ. ಎಪ್ರಿಲ್ 6ರಿಂದ ಕಾಲುವೆಗಳನ್ನು ಕೇವಲ ಕುಡಿಯುವ ನೀರಿನ ಪೂರೈಕೆಗೆ ಮಾತ್ರ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರೈತರ ಬೆಳೆಗಳಿಗೆ ಮತ್ತು ಜನರಿಗೆ ಕುಡಿಯುವ ನೀರು ಪೂರೈಸಲು ಸರ್ಕಾರ ಎಲ್ಲಾ ಹಂತದಲ್ಲೂ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ