ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ 7ನೇ ತರಗತಿಯಲ್ಲಿ ಪಬ್ಲಿಕ್ ಪರೀಕ್ಷೆ ಮಾಡಿ ಮಕ್ಕಳ ಕಲಿಕೆಯ ಮೌಲ್ಯಮಾಪನ ಮಾಡಲಾಗುತ್ತದೆಯೇ ಹೊರತು ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವುದಿಲ್ಲ ಎಂಬುದಾಗಿ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಹಿಂದೆ 7ನೇ ತರಗತಿಯಲ್ಲಿ ನಡೆಯುತ್ತಿದ್ದ ಪಬ್ಲಿಕ್ ಪರೀಕ್ಷೆಯನ್ನು ತೆಗೆದುಹಾಕಿದ ಪರಿಣಾಮ ಮಕ್ಕಳ ಕಲಿಕೆಯಲ್ಲಿ ಉತ್ತಮ ಫಲಿತಾಂಶ ಕಂಡುಬಂದಿಲ್ಲ. ಈ ಹಿನ್ನಲೆಯಲ್ಲಿ ಮತ್ತೆ 7ನೇ ತರಗತಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸಲು ತೀರ್ಮಾನಿಸಿರುವುದಾಗಿ ಅವರು ಹೇಳಿದ್ದಾರೆ.