ರಾಜ್ಯದಲ್ಲಿ ಮುಂದಿನ 5 ದಿನ ಉತ್ತಮ ಮಳೆ: 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

sampriya

ಬುಧವಾರ, 5 ಜೂನ್ 2024 (15:42 IST)
ಬೆಂಗಳೂರು: ನೈರುತ್ಯ ಮುಂಗಾರು ರಾಜ್ಯಕ್ಕೆ ಆಗಮಿಸಿ ಐದಾರು ದಿನ ಕಳೆಯುತ್ತಿದ್ದಂತೆ ಉತ್ತಮ ಮಳೆಯಾಗುತ್ತಿದೆ. ಅಲ್ಲದೆ, ಮುಂದಿನ 5 ದಿನ ರಾಜ್ಯದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ 17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, ಈಗಾಗಲೇ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ.

 ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯ ಮುನ್ಸೂಚನೆ ಕೊಟ್ಟಿದೆ.

ಈ ಜಿಲ್ಲೆಗಳಲ್ಲಿ ಗುಡುಗು-ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದ್ದು, 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮಳೆಯಿಂದಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ