ವೈದ್ಯಕೀಯ ಸೀಟು ಹಂಚಿಕೆ: ಸರಕಾರ, ಖಾಸಗಿ ಶಿಕ್ಷಣ ಸಂಸ್ಥೆಗಳ ಚರ್ಚೆ ವಿಫಲ

ಸೋಮವಾರ, 30 ಮೇ 2016 (19:02 IST)
ಸಿಇಟಿ ಆಧಾರದ ಮೇಲೆ ವೈದ್ಯಕೀಯ ಸೀಟು ಹಂಚಿಕೆ ಕುರಿತು ಸರಕಾರ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಜೊತೆ ನಡೆದ ಮಾತುಕತೆ ವಿಫಲವಾಗಿದೆ. 
 
ಬೆಂಗಳೂರಿನ ಪ್ಯಾಲೇಸ್ ರಸ್ತೆಯಲ್ಲಿರುವ ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಸಿಇಟಿ ಆಧಾರದ ಮೇಲೆ ವೈದ್ಯಕೀಯ ಸೀಟು ಹಂಚಿಕೆ ಮಾಡುವಂತೆ ಸರಕಾರ ಖಾಸಗಿ ಶಿಕ್ಷಣ ಸಂಸ್ಥೆಗಳ ಸಭೆ ಕರೆಯಲಾಗಿತ್ತು. ಸರಕಾರದ ನಿಲುವಿಗೆ ಒಪ್ಪಿಗೆ ಸೂಚಿಸದ ಖಾಸಗಿ ಸಂಸ್ಥೆಗಳು ಸಿಇಟಿ ಆಧಾರ ಮೇಲೆ ವೈದ್ಯಕೀಯ ಸೀಟು ನೀಡಲು ನಿರಾಕರಿಸಿವೆ.
 
ಸಭೆ ಬಳಿಕ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಸಿಇಟಿ ಆಧಾರದ ಮೇಲೆ ವೈದ್ಯಕೀಯ ಸೀಟು ಹಂಚಿಕೆ ಮಾಡುವ ಪದ್ಧತಿಯನ್ನು ಖಾಸಗಿ ಸಂಸ್ಥೆಗಳ ಒಪ್ಪಬೇಕಾಗಿದೆ. ಈ ಕುರಿತು ಎಲ್ಲ ರೀತಿಯಲ್ಲೂ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಮನವೊಲಿಸಲು ಪ್ರಯತ್ನ ಮಾಡುತ್ತೇವೆ. ಎನ್ನು ಎರಡು ಸುತ್ತಿನ ಮಾತುಕತೆ ಬಾಕಿ ಇದೆ. ಈ ಪದ್ಧತಿಗೆ ರಾಜ್ಯ ಸರಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
 
ನೀಟ್ ಆಧಾರದ ಮೇಲೆ ವೈದ್ಯಕೀಯ ಸೀಟು ಹಂಚಿಕೆ ಮಾಡಬೇಕು ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಪಟ್ಟು ಹಿಡಿದಿದೆ. ಆದರೆ, ಖಾಸಗಿ ಶಿಕ್ಷಣ ಸಂಸ್ಥೆಗಳ ವಾದವನ್ನು ಒಪ್ಪಲಾಗದು ಎಂದು ತಿಳಿಸಿರುವ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಸಿಇಟಿ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲು ಸರಕಾರದ ಕೋಟಾ ನೀಡಬೇಕು ಎಂದು ಒತ್ತಾಯಿಸಿದ್ದಾರೆ.  

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ