ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೋಟ್ ಬ್ಯಾಂಕ್‌ಗಾಗಿ ರಾಜ್ಯ ಸರಕಾರ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವ ಹುನ್ನಾರ ನಡೆಸುತ್ತಿದೆ. ಕಳೆದ ವರ್ಷ ಟಿಪ್ಪು ಸುಲ್ತಾನ್ ಜಯಂತಿ ವೇಳೆ ಮಡಿಕೇರಿಯಲ್ಲಿ ಕುಟ್ಟಪ್ಪನವರ ಕೊಲೆಯಾಯಿತು. ಕೇರಳದಿಂದ 2 ಸಾವಿರ ಗೂಂಡಾಗಳು ಆಯುಧಗಳ ಸಮೇತ ರಾಜ್ಯಕ್ಕೆ ಆಗಮಿಸಿದ್ದರು. ಟಿಪ್ಪು ಜಯಂತಿಯಿಂದ ರಾಜ್ಯ ಸರಕಾರಕ್ಕೆ ಇನ್ನೇಷ್ಟು ಬಲಿ ಬೇಕು ಎಂದು ಪ್ರಶ್ನಿಸಿದರು.
ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ.......
ಹಾಡುಹಗಲೇ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ 8 ಗಂಟೆಯಲ್ಲಿ ಆರೋಪಿಗಳನ್ನು ಪತ್ತೆ ಮಾಡುತ್ತೇವೆ ಎಂದು ಪೊಲೀಸ್ ಆಯುಕ್ತ ಮೇಘರಿಕ್ ಹೇಳಿದ್ದರು. ಆದರೆ, 3 ಬಾರಿ 8 ಗಂಟೆ ಕಳೆದರೂ ಇನ್ನೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು.