ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರು ಎಲ್ಲರಿಗೂ ಸೇಫ್. ಎಲ್ಲರಿಗೂ ರಕ್ಷಣೆ ನೀಡುವುದು ಸರಕಾರದ ಕರ್ತವ್ಯ. ಮಹಿಳೆಯರು ಹಾಗೂ ಮಕ್ಕಳ ರಕ್ಷಣೆಗೆ ರಾಜ್ಯ ಸರಕಾರ ಮೊದಲ ಆದ್ಯತೆ ನೀಡಲಾಗುತ್ತಿದೆ. ಆದರೆ, ಬೆಂಗಳೂರನ್ನು ಬೇರೆ ರೀತಿಯಲ್ಲಿ ಬಿಂಬಿಸಲಾಗುತ್ತಿದೆ ಎಂದು ದೂರಿದರು.
ಇನ್ಮುಂದೆ ಟೈಟ್ ಸೆಕ್ಯೂರಿಟಿ....
ರಾತ್ರಿ ವೇಳೆ ಅನಗತ್ಯವಾಗಿ ಸುತ್ತಾಡುವವರನ್ನು ಹಿರಿಯ ಪೊಲೀಸ್ ಅಧಿಕಾರಿಗಳು ವಿಚಾರಣೆಗೊಳಪಡಿಸಲಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಮಫ್ತಿಯಲ್ಲಿಯೂ ಸಹ ಪೊಲೀಸರು ಕಾರ್ಯನಿರ್ವಹಿಸಲಿದ್ದಾರೆ. ಜೊತೆಗೆ ನಗರದಲ್ಲಿ ಹೊಸದಾಗಿ 550 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.