ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸರ್ಕಾರಿ ನೌಕರರ ಕರೆ

ಬುಧವಾರ, 22 ಫೆಬ್ರವರಿ 2023 (08:48 IST)
ಬೆಂಗಳೂರು : 7ನೇ ವೇತನ ಆಯೋಗ ಜಾರಿ ವಿಚಾರವಾಗಿ ಸರ್ಕಾರದ ನಡೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತೀವ್ರ ಅಸಮಾಧಾನ ಹೊರಹಾಕಿದೆ.

ಸಂಘದ ಬೇಡಿಕೆ ಈಡೇರಿಸದಿದ್ದರೆ ಮಾ.1 ರಿಂದ ರಾಜ್ಯಾದ್ಯಂತ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಕರೆ ನೀಡಿದೆ.

ರಾಜ್ಯ ಬಜೆಟ್ ಮಂಡನೆ ವೇಳೆ ಏಳನೇ ವೇತನ ಆಯೋಗ ಜಾರಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸ್ತಾಪಿಸದಿರುವುದಕ್ಕೆ ನೌಕರರ ಸಂಘ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಈ ಹಿನ್ನೆಲೆಯಲ್ಲಿ ಸಂಘವು ಮಂಗಳವಾರ ತುರ್ತು ಕಾರ್ಯಕಾರಿಣಿ ಸಭೆ ಕರೆದು ಕೆಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ