ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ ಗುಡ್‌ನ್ಯೂಸ್ ಕೊಟ್ಟ ಸರ್ಕಾರ

Sampriya

ಗುರುವಾರ, 25 ಜುಲೈ 2024 (18:00 IST)
ಮಂಗಳೂರು:  ಕಳೆದ ಕೆಲ ವರ್ಷಗಳಿಂದ ಗೌರವಧನ ಹೆಚ್ಚಳಕ್ಕೆ ಹೋರಾಟ ಮಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕೊನೆಗೂ ಸರ್ಕಾರದಿಂದ ಸ್ಪಂದನೆ ಸಿಕ್ಕಿದೆ.

ಇದೀಗ ಗೌರವ ಧನ ಹೆಚ್ಚಳಕ್ಕೆ ಸರಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ರವರು ಶೀಘ್ರವೇ ಗೌರವಧನ ಹೆಚ್ಚಳ ಮಾಡಲಾಗುವುದು ಎಂಬ ಭರವಸೆಯನ್ನು ನೀಡಿದ್ದಾರೆ.

ಇಂದು ಪ್ರಶ್ನೋತ್ತರ ಕಲಾಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಈ ವಿಚಾರವಾಗಿ ಪ್ರಶ್ನೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಅಂಗನವಾಡಿ ಮತ್ತು ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಈಗಾಗಲೇ ಸರ್ಕಾರದ ಮುಂದೆ ಈ ಪ್ರಸ್ತಾವನೆ ಇದ್ದು ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

2017 ರಲ್ಲಿ ಸಿದ್ದರಾಮಯ್ಯ ಸರಕಾರ ವಿದ್ದಾಗ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಗೌರವ ಧನ ಹೆಚ್ಚಳ ಮಾಡಿದ್ದರು. ಇದಾದ ಬಳಿಕ ಗೌರವ ಧನ ಹೆಚ್ಚಾಗಿಲ್ಲ. ಇದೀಗ ಮತ್ತೆ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದು ಸರಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ