ಬೆಂಗಳೂರು : ರೈತರು ವಾಣಿಜ್ಯ ಬ್ಯಾಂಕ್ ಗಳಿಂದ ಪಡೆದಿರುವ ಬೆಳೆ ಸಾಲಮನ್ನಾ ಯೋಜನೆಯ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಆ ಮೂಲಕ ಒಂದೇ ಕಂತಿನಲ್ಲಿ ಹಣ ಬಿಡುಗಡೆಗೆ ಸರ್ಕಾರ ಆದೇಶಿಸಿದೆ.
ರೈತರು ವಾಣಿಜ್ಯ ಬ್ಯಾಂಕ್ ಗಳಿಂದ ಪಡೆದಿರುವ ಬೆಳೆಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ಅರ್ಹತೆ ಹೊಂದಿರುವ ರಿಸ್ಟ್ರಕ್ಚರ್ಡ್ ಸಾಲಗಳು, ಅರ್ಹತೆ ಹೊಂದಿರುವ ಓವರ್ ಡ್ಯೂ ಸಾಲಗಳು ಹಾಗೂ ಪ್ರೋತ್ಸಾಹ ಧನಕ್ಕೆ ಅರ್ಹತೆ ಹೊಂದಿರುವ ಸಾಲಗಳಿಗೆ ಸಂಬಂಧಿಸಿದಂತೆ ಈಗಾಗಲೇ ಬಿಡುಗಡೆಯಾದ ಮೊತ್ತವನ್ನು ಕಡಿತಗೊಳಿಸಿ, ಉಳಿದ ಸಂಪೂರ್ಣ ಮೊತ್ತವನ್ನು ಒಂದೇ ಕಂತಿನಲ್ಲಿ ರೈತರ ಖಾತೆಗೆ ಬಿಡುಗಡೆ ಮಾಡಲು ಅನುಮೋದನೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಹಾಗೇ ಎನ್.ಪಿ.ಎ. ಸಾಲಗಳು ಮತ್ತು ದಿನಾಂಕ 1-1-2018 ರಿಂದ ಬಡ್ಡಿ ಮೊತ್ತ ಪಾವತಿಸುವ ಬಗ್ಗೆ ಪ್ರತ್ಯೇಕವಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ.