ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧ
ಕಾವೇರಿ ನೀರು ನಿಯಂತ್ರಣ ಸಮಿತಿಯು 15 ದಿನಗಳ ಕಾಲ ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಮತ್ತೊಮ್ಮೆ ಶಿಫಾರಸು ಮಾಡಿದ್ದು, ಆದೇಶ ಏನೇ ಇರಬಹುದು, ಆದರೆ ಅದನ್ನು ಲೆಕ್ಕಿಸದೆ ರೈತರ ಹಿತ ಕಾಪಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನೆರೆಯ ತಮಿಳುನಾಡು ವಿರೋಧಿಸುತ್ತಿರುವ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆದ್ಯತೆ ನೀಡಲಾಗಿದೆ. ಇದುವೇ ನಮ್ಮ ಸರ್ಕಾರದ ಆದ್ಯತೆ ಎಂದು ರಾಜ್ಯ ಜಲಸಂಪನ್ಮೂಲ ಸಚಿವರೂ ಆಗಿರುವ ಅವರು ಹೇಳಿದರು.ಅಕ್ಟೋಬರ್ 16 ರಿಂದ ಅಕ್ಟೋಬರ್ 31ರವರೆಗೆ ತಮಿಳುನಾಡಿಗೆ ಪ್ರತಿದಿನ 3,000 ಕ್ಯೂಸೆಕ್ ನೀರನ್ನು ಕರ್ನಾಟಕ ತನ್ನ ಜಲಾಶಯಗಳಿಂದ ಹರಿಸಬೇಕು ಎಂದು ಸಿಡಬ್ಲ್ಯುಆರ್‌ಸಿ ನೆನ್ನೆ ಶಿಫಾರಸು ಮಾಡಿದೆ.