ಪೊಲೀಸ್ ಅಧಿಕಾರಿಗಳಿಗೆ ರಕ್ಷಣೆ ನೀಡುವಲ್ಲಿ ಸರಕಾರ ಬದ್ಧ: ಎಚ್.ಆಂಜನೇಯ

ಮಂಗಳವಾರ, 7 ಜೂನ್ 2016 (10:59 IST)
ಜನರ ಪ್ರಾಣ ರಕ್ಷಿಸುವ ಪೊಲೀಸರಿಗೆ ರಾಜ್ಯ ಸರಕಾರ ರಕ್ಷಣೆ ನೀಡುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ಸ್ವಷ್ಟಪಡಿಸಿದ್ದಾರೆ.
 
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ, ರಾಜ್ಯದಲ್ಲಿ ಜನರ ಪ್ರಾಣ ರಕ್ಷಿಸುವ ಪೊಲೀಸರಿಗೆ ರಾಜ್ಯ ಸರಕಾರ ರಕ್ಷಣೆ ನೀಡುತ್ತಿದೆ. ರಾಜ್ಯ ಸರಕಾರ ಪೊಲೀಸ್ ಅಧಿಕಾರಿಗಳಿಗೆ ಯಾವುದೇ ತರಹದ ತೊಂದರೆ ನೀಡುತ್ತಿಲ್ಲ ಎಂದು ಹೇಳಿದ್ದಾರೆ.
 
ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರ ರಾಜೀನಾಮೆ ನೀಡಿರುವ ವಿಜಾರ ಮಾಧ್ಯಮಗಳ ಮೂಲಕ ನನ್ನ ಗಮನಕ್ಕೆ ಬಂದಿದೆ. ಅವರ ರಾಜೀನಾಮೆ ವಿಜಾರ ಗೃಹ ಸಚಿವರಿಗೆ ಬಿಟ್ಟ ವಿಜಾರ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ