ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಸರ್ಕಾರದು - ಡಿ. ಕೆ. ಶಿವಕುಮಾರ್

ಮಂಗಳವಾರ, 15 ಮಾರ್ಚ್ 2022 (19:15 IST)
ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ತನ್ನ ತೀರ್ಪು ನೀಡಿದೆ. ಆದರೆ ಶಿಕ್ಷಣ, ಕಾನೂನು ಸುವ್ಯವಸ್ಥೆ ಹಾಗೂ ಕೋಮು ಸೌಹಾರ್ದತೆಯ ಜವಾಬ್ದಾರಿ ಕರ್ನಾಟಕ ಸರ್ಕಾರದ ಮೇಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಹೈಕೋರ್ಟ್ ತೀರ್ಪಿನ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಡಿಕೆಶಿ 'ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕರ್ತವ್ಯ, ಸರ್ಕಾರವು ಪ್ರಬುದ್ಧವಾಗಿ ನಡೆದುಕೊಳ್ಳಬೇಕು. ಶಿಕ್ಷಣ ಎಲ್ಲದಕ್ಕಿಂತಲೂ ಮುಖ್ಯವಾಗಿರುತ್ತದೆ. ಶಾಲೆ-ಕಾಲೆಜುಗಳ ಸುತ್ತಮುತ್ತ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಕೋಮು ಸೌಹಾರ್ದತೆಯ ಖಾತ್ರಿಯನ್ನು ಸರ್ಕಾರ ಕೊಡಬೇಕು ಎಂದು ತಿಳಿಸಿದ್ದಾರೆ.ಹೈಕೋರ್ಟ್ ತೀರ್ಪಿನ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಡಿಕೆಶಿ 'ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕರ್ತವ್ಯ, ಸರ್ಕಾರವು ಪ್ರಬುದ್ಧವಾಗಿ ನಡೆದುಕೊಳ್ಳಬೇಕು. ಶಿಕ್ಷಣ ಎಲ್ಲದಕ್ಕಿಂತಲೂ ಮುಖ್ಯವಾಗಿರುತ್ತದೆ. ಶಾಲೆ-ಕಾಲೆಜುಗಳ ಸುತ್ತಮುತ್ತ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಕೋಮು ಸೌಹಾರ್ದತೆಯ ಖಾತ್ರಿಯನ್ನು ಸರ್ಕಾರ ಕೊಡಬೇಕು ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ