ಸಿಐಡಿ ತನಿಖೆಯಲ್ಲಿ ಸರಕಾರದ ಹಸ್ತಕ್ಷೇಪವಿಲ್ಲ: ಜಿ.ಪರಮೇಶ್ವರ್

ಸೋಮವಾರ, 11 ಜುಲೈ 2016 (17:12 IST)
ಮಂಗಳೂರ ಡಿವೈಎಸ್‌‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತಂತೆ ಸಿಐಡಿ ತನಿಖೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡಲಾಗುವುದಿಲ್ಲ ಎಂದು ರಾಜ್ಯ ಗೃಹ ಖಾತೆ ಸಚಿವ ಜಿ.ಪರಮೇಶ್ವರ್ ಸ್ವಷ್ಟಪಡಿಸಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಗೃಹ ಖಾತೆ ಸಚಿವ ಜಿ.ಪರಮೇಶ್ವರ್, ಮಂಗಳೂರ ಡಿವೈಎಸ್‌‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲಾಗುವುದಿಲ್ಲ. ಒಂದು ಬಾರಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದರೆ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಲು ಬರುವುದಿಲ್ಲ ಎಂದು ತಿಳಿಸಿದ್ದಾರೆ.
 
ಮಂಗಳೂರ ಡಿವೈಎಸ್‌‌ಪಿ ಎಂ.ಕೆ.ಗಣಪತಿ ಅವರು ಆತ್ಮಹತ್ಯೆಗೂ ಮುಂಚೆ ಖಾಸಗಿ ಮಾಧ್ಯಮಕ್ಕೆ ಸಂದರ್ಶನ ನೀಡಿರುವ ಕುರಿತು ತನಿಖೆ ನಡೆಸುತ್ತಾರೋ ಅಥವಾ ಇಲ್ಲವೊ ಎನ್ನುವುದು ಸಿಐಡಿ ಅಧಿಕಾರಿಗಳಿಗೆ ಬಿಟ್ಟ ವಿಚಾರವಾಗಿದೆ. ಸಿಐಡಿ ಸ್ವಾಯುತ್ತ ಸಂಸ್ಥೆಯಾಗಿ ಕೆಲಸ ನಿರ್ವಹಿಸುತ್ತಿದೆ. ಎಂದು ರಾಜ್ಯ ಗೃಹ ಖಾತೆ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
 

ವೆಬ್ದುನಿಯಾವನ್ನು ಓದಿ