ಮರಿಗೌಡನನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ಶನಿವಾರ, 23 ಜುಲೈ 2016 (10:33 IST)
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಿಗೌಡ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
 
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಧಮ್ಕಿ ನೀಡಿರುವ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮರಿಗೌಡ ನನ್ನ ಆಪ್ತ ಸ್ನೇಹಿತ. ಆದರೆ, ಕಾನೂನಿನ ದೃಷ್ಠಿಯಲ್ಲಿ ಎಲ್ಲರೂ ಒಂದೇ. ಮರಿಗೌಡ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳುವಲ್ಲಿ ಪೊಲೀಸರು ಸ್ವತಂತ್ರರು ಎಂದು ತಿಳಿಸಿದರು. 
 
ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ ಕುರಿತು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರಿಗೆ ನೌಕರರ ಸಂಘದ ಜೊತೆ ಚರ್ಚಿಸಿದ್ದೇನೆ. 8 ಪ್ರತಿಶತದಷ್ಟು ವೇತನ ಹೆಚ್ಚಳ ಮಾಡಲು ಒಪ್ಪಿಗೆ ಸೂಚಿಸಿದ್ದೇನೆ. ಆದರೆ, ಅವರು 35 ಪ್ರತಿಶತದಷ್ಟು ವೇತನವನ್ನು ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಸಾರಿಗೆ ಸಂಸ್ಥೆಗಳಿಗೆ ಅಷ್ಟುಂದು ಶಕ್ತಿ ಇಲ್ಲವೆಂದು ತಿಳಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ