ಎಸ್ಮಾ ಜಾರಿಯಿಂದ ಸರಕಾರ, ನೌಕರರ ವಿರಸ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

ಮಂಗಳವಾರ, 26 ಜುಲೈ 2016 (11:51 IST)
ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ಎಸ್ಮಾ ಜಾರಿ ಮಾಡಿದರೆ ಮನಸ್ಸುಗಳು ಕೆಟ್ಟುಹೊಗುತ್ತವೆ. ಅದಕ್ಕಾಗಿ ಎಸ್ಮಾ ಜಾರಿ ಬೇಡ ಎನ್ನುವುದು ಸರಕಾರದ ಉದ್ದೇಶ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಸಾರಿಗೆ ನೌಕರರ ಸಂಘದೊಂದಿಗೆ ಚರ್ಚೆ ನಡೆಸಲು ಸಿದ್ಧವಾಗಿದೆ. ಸಾರಿಗೆ ನೌಕರ ಸಂಘಟನೆಗಳು ಸರಕಾರದೊಂದಿಗೆ ಚರ್ಚಿಸಿ ಸಮಸ್ಯೆಯನ್ನು ಪರಿಪರಿಸಿಕೊಳ್ಳಲು ಅವಕಾಶವಿದೆ. ಸಾರಿಗೆ ನೌಕರರ ಹಠಮಾರಿ ಧೋರಣೆಯನ್ನು ಬಿಟ್ಟು ಚರ್ಚೆಗೆ ಬರಲಿ ಎಂದು ತಿಳಿಸಿದರು.
 
ರಾಜ್ಯಾದ್ಯಂತ ಮುಷ್ಕರ ಕೈಗೊಂಡಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇದರಿಂದ ರಾಜ್ಯ ಸರಕಾರ ಹಾಗೂ ಸಾರಿಗೆ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ ಎಂದು ತಿಳಿಸಿದರು.

 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ