ಬಿಬಿಎಂಪಿ ಶಾಲಾ ಕಾಲೇಜುಗಳಿಗೆ ಈಗ ಶಿಕ್ಷಕರ ನೇಮಕ ಮಾಡಲು ಸರ್ಕಾರ ಹಿಂದೇಟು

ಶನಿವಾರ, 11 ಜೂನ್ 2022 (19:13 IST)
ಕೊರೊನಾ ಸೋಂಕು ಶುರುವಾದ ಬಳಿಕ ಬಿಬಿಎಂಪಿ ಶಾಲಾ ಕಾಲೇಜುಗಳಿಗೆ ಶುಕ್ರದೆಸೆ ಶುರುವಾಗಿತ್ತು. ಶಾಲಾ ಕಾಲೇಜುಗಳಿಗೆ ದಾಖಲಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಆದರೆ, ಈ ಶಾಲಾ ಕಾಲೇಜುಗಳಿಗೆ ಈಗ ಶಿಕ್ಷಕರ ನೇಮಕ ಮಾಡಲು ಸರ್ಕಾರ ಹಿಂದೇಟು ಹಾಕುತ್ತಿದೆ.
ಇನ್ನು ಕಳೆದ ಡಿಸೆಂಬರ್ನಲ್ಲಿ 65 ಪ್ರಾಥಮಿಕ ಶಾಲೆ ಸಹ ಶಿಕ್ಷಕರು, 139 ಪ್ರೌಢ ಶಾಲೆ ಸಹ ಶಿಕ್ಷಕರು, 6 ದೈಹಿಕ ಶಿಕ್ಷಕರು ಸೇರಿ ಒಟ್ಟು 210 ಶಿಕ್ಷಕರ ನೇಮಕಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ನೇಮಕಾತಿ ಪ್ರಕ್ರಿಯೆಯಲ್ಲಿ ಹತ್ತಾರು ವರ್ಷದಿಂದ ಪಾಲಿಕೆ ಶಾಲಾ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಸೇವಾ ಕೃಪಾಂಕ ಮತ್ತು ವಯೋಮಿತಿ ಸಡಿಲಿಕೆ ಮಾಡಿ ನೇಮಕಾತಿ ನಡೆಸುವಂತೆ ಪ್ರಸ್ತಾವನೆಯಲ್ಲಿ ಹೇಳಲಾಗಿತ್ತು. ಇದು ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದು, ನೇಮಕಾತಿ ವಿಳಂಬವಾಗುತ್ತಿದೆ. ಈ ಸಂಬಂಧಿಸಿದಂತೆ ಆರ್ಥಿಕ ಇಲಾಖೆ, ಕಾನೂನು ಇಲಾಖೆಯಿಂದ ಅನುಮೋದನೆ ಕೇಳಲಾಗುತ್ತಿದೆ ಅಂತ ಬಿಬಿಎಂಪಿ ಶಿಕ್ಷಣ ವಿಭಾಗದ ಸಹಾಯಕ ಆಯುಕ್ತ ಉಮೇಶ್ ಪ್ರತಿಕ್ರಿಯೆ ನೀಡಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ