ಕೊರೊನಾ 3 ಸಕಲ ಸಿದ್ದತೆ

ಗುರುವಾರ, 16 ಡಿಸೆಂಬರ್ 2021 (18:01 IST)
ವಿದೇಶಗಳಿಂದ ಬಂದವರನ್ನು ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸುವುದು ಅಗತ್ಯವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಓಮಿಕ್ರಾನ್ ವೈರಾಣು ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟುನಿಟ್ಟಿನ ಕ್ರಮಕ್ಕೆ ತೀರ್ಮಾನ ಮಾಡಲಾಗಿದೆ.ಹಿಂದಿನಂತೆ ಸಾಂಸ್ಥಿಕ ಕ್ವಾರಂಟೈನ್ ಪದ್ಧತಿ ಜಾರಿ ಮಾಡುವ ಕುರಿತು ಮಾತುಕತೆ ನಡೆಯುತ್ತಿದೆ ಎಂದು ಹೇಳಿದರು. ಇನ್ನೂ ಪಾಲಿಕೆ ವ್ಯಾಪ್ತಿಯ ಸದ್ಯ 300 ಮಂದಿ ಕೋವಿಡ್ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 3 ಸಾವಿರ ಹಾಸಿಗೆಗಳನ್ನು ಕೋವಿಡ್ ಹಾಗೂ ಓಮಿಕ್ರಾನ್ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿಟ್ಟಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚು ಜನರು ದಾಖಲಾದರೆ ಇನ್ನಷ್ಟು ಹಾಸಿಗೆಗಳನ್ನು ಮೀಸಲಿಡುತ್ತೇನೆ ಎಂದು ಗೌರವ್ ಗುಪ್ತಾ ಮಾಹಿತಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ