ವಿದ್ಯುತ್ ಸಮಸ್ಯೆ ನಿಭಾಯಿಸಲು ಸಿದ್ದ: ಡಿ.ಕೆ.ಶಿವಕುಮಾರ್

ಸೋಮವಾರ, 19 ಸೆಪ್ಟಂಬರ್ 2016 (16:51 IST)
ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿರುವ ನಿಟ್ಟಿನಲ್ಲಿ ಬೇಸಿಗೆಯಲ್ಲಿ ಉಂಟಾಗಬಹುದಾದ 600-700 ಮೆಗಾವ್ಯಾಟ್ ವಿದ್ಯುತ್ ಕೊರತೆ ಸರಿದೂಗಿಸಿ, ಪರಿಸ್ಥಿತಿ ನಿಭಾಯಿಸಲು ಸಿದ್ಧರಾಗಿದ್ದೇವೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
 
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜಲ ವಿದ್ಯುತ್ ಉತ್ಪಾದನೆಗಾಗಿ 45 ಪ್ರತಿಶತ ನೀರಿದೆ. ಅಲ್ಲಿ ವಿದ್ಯುತ್ ಉತ್ಪಾದನೆ ಮಾಡದೇ ನೀರನ್ನು ಉಳಿಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. 
 
ರಾಯಚೂರು ಹಾಗೂ ಬಳ್ಳಾರಿ ಥರ್ಮಲ್ ವಿದ್ಯುತ್ ಸ್ಥಾವರಗಳಿಂದ 1000 ದಿಂದ 1200 ಮೆಗಾವ್ಯಾಟ್ ವಿದ್ಯುತ್ ಲಭ್ಯವಾಗುತ್ತಿದ್ದು, ಅಗತ್ಯ ಬಿದ್ದಲ್ಲಿ ಒಂದು ಸಾವಿರ ಮೆಗಾವ್ಯಾಟ್ ವಿದ್ಯುತ್‌ನ್ನು ಖರೀದಿ ಮಾಡಲು ರಾಜ್ಯ ಸರಕಾರ ಸಿದ್ಧವಿದೆ ಎಂದರು.
 
ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವಿದ್ಯುತ್ ಕೊರತೆ ಇದ್ದು, ಲೋಡ್ ಶೆಡ್ಡಿಂಗ್ ಮಾಡದಯೇ ವಿದ್ಯುತ್ ಪೊರೈಕೆ ಮಾಡುವುದಾಗಿ ಭರವಸೆ ನೀಡಿದರು.  
 
ರಾಜ್ಯದಲ್ಲಿ ವಿದ್ಯತ್ ಸ್ವಾವಂಲಂಬನೆ ಸಾಧಿಸುವ ನಿಟ್ಟಿನಲ್ಲಿ ಹಿಂದಿನ ರೂಫ್ಟಾಪ್ ಮಾದರಿಯಲ್ಲಿ ನೂರು ತಾಲೂಕುಗಳಲ್ಲಿ ತಲಾ 20 ಮೆಗಾವ್ಯಾಟ್‌ನಂತೆ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡಲು ರಾಜ್ಯ ಸರಕಾರ ಯೋಜನೆ ರೂಪಿಸುತ್ತಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ