ಸರಕಾರಿ ಅಧಿಕಾರಿಗಳು ಕಾನೂನು ಉಲ್ಲಂಘಿಸುವುದು ತಪ್ಪು: ಸಚಿವ ಜಯಚಂದ್ರ

ಗುರುವಾರ, 9 ಜೂನ್ 2016 (15:55 IST)
ಸರಕಾರಿ ಅಧಿಕಾರಿಗಳು ಕಾನೂನು ಉಲ್ಲಂಘನೆ ಮಾಡುವುದು ತಪ್ಪು ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
 
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ರಾಜೀನಾಮೆಗೆ ಸಂಬಂಧಿಸಿದಂತೆ ಸರಕಾರಿ ಅಧಿಕಾರಿಗಳು ನಿಯಮಾನುಸಾರವಾಗಿ ಕೆಲಸ ಮಾಡಬೇಕಾಗುತ್ತದೆ. ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಸರಕಾರ ಕುರಿತು ಟೀಕೆ ಮಾಡಬಾರದಾಗಿತ್ತು ಎಂದು ಹೇಳಿದ್ದಾರೆ.
 
ಅನುಪಮಾ ಶೆಣೈ ಅವರ ಕಾರ್ಯವ್ಯಾಪ್ತಿಯಲ್ಲಿ ಯಾರಾದರೂ ಅವರಿಗೆ ಕಿರುಕುಳ ನೀಡಿದ್ದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬಹುದಾಗಿತ್ತು. ಅಥವಾ ಗೃಹ ಸಚಿವರಿಗೆ ಮಾಹಿತಿ ನೀಡಬೇಕಿತ್ತು. ಮಹಿಳಾ ಅಧಿಕಾರಿಯಾಗಿರುವುದರಿಂದ ಅವರ ಮನವೊಲಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ