ಸರ್ಕಾರಿ ಜಾಗ, ಸ್ಮಶಾನ ಉಳಿಸುವಂತೆ ಆಗ್ರಹಿಸಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿದೆ.
ಹಲವು ರೈತ ಸಂಘಟನೆಯಿಂದ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆದಿದೆ.
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕು ಕಚೇರಿ ಮುಂದೆ ಅಹೋ ರಾತ್ರಿ ಧರಣಿಗೆ ನಿರ್ಧಾರ ಮಾಡಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಆಗುತ್ತಿರುವ ಭ್ರಷ್ಟಾಚಾರ ವಿರುದ್ಧ ಧಿಕ್ಕಾರ ಕೂಗಿದ ರೈತರು, ಕೂಡಲೇ ಸ್ಥಳಕ್ಕೆ ತಹಶಿಲ್ದಾರರು ಹಾಗು ಜಿಲ್ಲಾಧಿಕಾರಿ ಬರುವಂತೆ ಒತ್ತಾಯ ಮಾಡಿದರು.
ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸದಿದ್ದರೆ ಮನೆಯಲ್ಲಿರುವ ಜಾನುವಾರುಗಳನ್ನು ತಂದು ಅಹೋ ರಾತ್ರಿ ಹೋರಾಟದ ನಿರ್ಧಾರಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರೈತರು, ತಾಲ್ಲೂಕು ಕಚೇರಿ ಮುಂದೆ ಧರಣಿಯಲ್ಲಿ ಭಾಗಿಯಾಗಿದ್ದಾರೆ. ತಾಲ್ಲೂಕು ಕಚೇರಿ ಮುಂದೆ ಒಲೆ ಹಚ್ಚಿ ಅಡುಗೆ ಮಾಡಿದ ರೈತರು, ತಾಲ್ಲೂಕು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗಳನ್ನು ಹೊರಕಳಿಸಿ ತಾಲ್ಲೂಕು ಕಚೇರಿಗೆ ಬೀಗ ಜಡಿದಿದ್ದಾರೆ.