ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಪ್ಲಾಸ್ಮಾ ಬ್ಯಾಂಕ್ ಆರಂಭಿಸುವ ನಿರ್ಧಾರ ಮಾಡಿದೆ.
ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ನೀಡಿದ್ದು, ಖಾಸಗಿ ಸಹಭಾಗಿತ್ವದಲ್ಲಿ ಪ್ಲಾಸ್ಮಾ ಬ್ಯಾಂಕ್ ಆರಂಭಿಸಲು ಸಿದ್ಧತೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.