ಈ ಹಿನ್ನಲೆಯಲ್ಲಿ ಇಂದು ಸಾರಿಗೆ ನಿಗಮದ ನೌಕರರು ಕರ್ತವ್ಯಕ್ಕೆ ಹಾಜರಾಗದ ಕಾರಣ ಬಿಎಂಟಿಸಿ, ಕೆಎಸ್‍ಆರ್ ಟಿಸಿ ಸೇರಿದಂತೆ ಸರ್ಕಾರಿ ಸಾರಿಗೆ ವ್ಯವಸ್ಥೆಯ ಸೇವೆಯಲ್ಲಿ ಕೊಂಚ ವ್ಯತ್ಯಯವಾಗುವ ಸಾಧ್ಯತೆ ಇದೆ. ಎನ್ನಲಾಗಿದೆ. ಇಂದು 11 ಗಂಟೆಗೆ, ಲಾಲ್‍ಬಾಗ್ ನಿಂದ ಶಾಂತಿನಗರದ ಕೆಎಸ್‍ಆರ್ ಟಿಸಿ ಮುಖ್ಯ ಕಚೇರಿಯವರೆಗೆ ರ್ಯಾಲಿ ನಡೆಯಲಿದೆ. ರಾಜ್ಯಾದ್ಯಾಂತ ಸಾರಿಗೆ ನೌಕರರು ಹಾಗೂ ಬಿಎಂಟಿಸಿ ಚಾಲಕ ನಿರ್ವಾಹಕರು ಈ ರ್ಯಾಲಿ ಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಾರಿಗೆ ನೌಕರರ ವೇತನವನ್ನು ಸರ್ಕಾರವೇ ಭರಿಸಬೇಕು, ನಿಗಮಗಳಿಗೆ ಮೋಟಾರ್ ವೆಹಿಕಲ್ ತೆರಿಗೆ ರಿಯಾಯಿತಿ ನೀಡಬೇಕು, ಖಾಸಗಿ ಬಸ್ ಮಾಲೀಕರ ಕಾನೂನು ಬಾಹಿರ ಚಟುವಟಿಕೆ ನಿಲ್ಲಿಸುವಂತೆ ಮುಂತಾದ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರಿ ಸಾರಿಗೆ ನೌಕರರು ರ್ಯಾಲಿ ನಡೆಸಲಿದ್ದಾರೆ.