ಮೌಢ್ಯ ಬಿತ್ತುವ ಜ್ಯೋತಿಷ್ಯ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಲು ಸರ್ಕಾರ ಚಿಂತನೆ

ಸೋಮವಾರ, 7 ಡಿಸೆಂಬರ್ 2015 (18:01 IST)
ಮಾಧ್ಯಮಗಳಲ್ಲಿ ಪ್ರಸಾರವಾಗುವ ಜ್ಯೋತಿಷ್ಯ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಲು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ಮೌಢ್ಯಗಳು ಮತ್ತು ಕಂದಾಚಾರದ ವಿರುದ್ಧ ಹೋರಾಟ ಮಾಡಬೇಕು. ಟಿವಿಗಳಲ್ಲಿ ನೋಡಿ ಎಲ್ಲಿ ನೋಡಿದರೂ ಜ್ಯೋತಿಷ್ಯ, ಜಾತಕ ರಾಶಿಗಳ ಕಾರ್ಯಕ್ರಮಗಳು ಬರುತ್ತಿವೆ. ಜ್ಯೋತಿಷ್ಯ ಕಾರ್ಯಕ್ರಮಗಳು ಮೌಢ್ಯವನ್ನು ಬಿತ್ತುತ್ತವೆ.

ಇಂತಹ ಕಾರ್ಯಕ್ರಮಗಳ ಪ್ರಚಾರ ನಿಲ್ಲಿಸಲು ಚಿಂತನೆ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂತಹ ಕಾರ್ಯಕ್ರಮಗಳಿಂದ ನಾವು ಎಚ್ಚೆತ್ತುಕೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡ ಡಿ.ಜಿ. ಸಾಗರ್ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡುತ್ತಾ ಅವರು ಹೇಳಿದರು.

 ವಿಚಾರವಾದಿ ಪ್ರೊ. ಜಿ.ಕೆ. ಗೋವಿಂದ ರಾವ್ ಕೂಡ ದಿನ ಬೆಳಗಾದರೆ ದೃಶ್ಯ ಮಾಧ್ಯಮಗಳಲ್ಲಿ ಕಂದಾಚಾರದ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಬೇಕು ಎಂದು ಚಿಕ್ಕಮಗಳೂರಿನಲ್ಲಿ ಮಾತನಾಡುತ್ತಾ ಹೇಳಿದರು. ಇನ್ನೂ ಅನೇಕ ವಿಚಾರವಾದಿಗಳು ಕೂಡ ಯಾವುದೇ ವೈಜ್ಞಾನಿಕ ತಳಹದಿಯಿಲ್ಲದ ಜ್ಯೋತಿಷ್ಯ ಕಾರ್ಯಕ್ರಮಗಳನ್ನು ವಿರೋಧಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ