ಉತ್ತರ ಕರ್ನಾಟಕದ ಜನರ ಜೊತೆ ಸರ್ಕಾರ ನಿಲ್ಲುತ್ತದೆ- ಸಿಎಂ ಭರವಸೆ

ಶನಿವಾರ, 17 ಅಕ್ಟೋಬರ್ 2020 (10:25 IST)
ಮೈಸೂರು : ಭಾರೀ ಮಳೆಯಿಂದಾಗಿ ನೆರೆ ಹಾನಿ ಸಂಭವಿಸಿದ ಉತ್ತರ ಕರ್ನಾಟಕದ ಜನರ ಜೊತೆ ಸರ್ಕಾರ ನಿಲ್ಲುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ದಸರಾ ಉದ್ಘಾಟನಾ ಸಮಾರಂಭದಲ್ಲಿ  ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಕರ್ನಾಟಕ ಆರ್ಥಿಕವಾಗಿ ಸದೃಢವಾಗಲು ಶ್ರಮಿಸುತ್ತಿದ್ದೇನೆ. ಎಲ್ಲಾ ರೀತಿಯ ಪರಿಹಾರಕ್ಕೆ ಸರ್ಕಾರ ಕ್ರಮಕೈಗೊಳ್ಳಲಿದೆ. ನಿನ್ನೆ ಪ್ರಧಾನಿ ಮೋದಿ ಕರೆ ಮಾಡಿದ್ದರು. ನೆರೆ ಬಗ್ಗೆ ಮೋದಿ ಮಾಹಿತಿ ಪಡೆದಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ನೆರವು ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ