ರೈತರ ಹೋರಾಟಕ್ಕೆ ಮಣಿದ ಸರ್ಕಾರ: ವಕ್ಫ್ ಬೋರ್ಡ್ ನೀಡಿರುವ ನೋಟಿಸ್‌ ವಾಪಸ್‌ಗೆ ನಿರ್ಧಾರ

Sampriya

ಸೋಮವಾರ, 28 ಅಕ್ಟೋಬರ್ 2024 (14:48 IST)
Photo Courtesy X
ಬೆಂಗಳೂರು: ರಾಜ್ಯದಾದ್ಯಂತ ವಿವಾದ ಸೃಷ್ಟಿಯಾದ ಬೆನ್ನಲ್ಲೇ ವಿಜಯಪುರದ ರೈತರಿಗೆ ‌ವಕ್ಫ್ ಬೋರ್ಡ್ ನೀಡಿರುವ ನೋಟಿಸ್‌ ಅನ್ನು ವಾಪಸ್ ಪಡೆಯಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ  ಹೆಚ್.ಕೆ. ಪಾಟೀಲ್ ಸೂಚನೆ ನೀಡಿದ್ದಾರೆ.

ವಿಜಯಪುರ ಜಿಲ್ಲೆಯ ರೈತರ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಗುರುತಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನೋಟಿಸ್ ಹಿಂಪಡೆಯುವುದಾಗಿ ತಿಳಿಸಿದ್ದಾರೆ. ಅಲ್ಲದೆ ತಪ್ಪಿನ ಬಗ್ಗೆ ವಿಚಾರಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಸರ್ಕಾರಕ್ಕೆ ರೈತರ ಜಮೀನು ಕಬಳಿಕೆ ಮಾಡುವ ಉದ್ದೇಶ ಇಲ್ಲ. ಬಿಜೆಪಿಯವರು ಅನಾವಶ್ಯಕವಾಗಿ ರಾಜಕೀಯ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಮಾಡೋದು ಸೂಕ್ತ ಅಲ್ಲ. ರೈತರಿಗೆ ನೋಟಿಸ್‌ ಹೋಗಿದ್ದರೆ ಅದನ್ನು ವಾಪಸ್ ಪಡೆಯುತ್ತೇವೆ ಎಂದು ಎಂ. ಬಿ ಪಾಟೀಲ್ ಈಗಾಗಲೇ ಹೇಳಿದ್ದಾರೆ. ಸರ್ಕಾರ ನೋಟಿಸ್‌ ವಾಪಸ್ ಪಡೆಯಲಿದೆ. ಅಲ್ಲಿನ ತಹಶಿಲ್ದಾರ್ ತಪ್ಪು ಮಾಡಿದ್ದಾರೆ. ಹೀಗಾಗಿ ನೋಟಿಸ್‌ ವಾಪಸ್ ಪಡೆಯೋ ಕೆಲಸ ಮಾಡ್ತೀವಿ ಎಂದಿದ್ದಾರೆ.

ಅಲ್ಲಿ ತಹಶೀಲ್ದಾರ್ ತಪ್ಪು‌ ಮಾಡಿರೋದು. ತಹಶಿಲ್ದಾರ್ ನೊಟೀಸ್ ಕೊಟ್ಟಿದ್ರೆ ಅದನ್ನು ಡಿಸಿ ನೋಡ್ತಾರೆ. ಅದಕ್ಕೂ ಮೇಲೆ ಸರ್ಕಾರ ಇದೆ. ಹೀಗಿರುವಾಗ ಸಚಿವ ಜಮೀರ್ ಅಹಮ್ಮದ್‌ ಯಾಕೆ ರಾಜೀನಾಮೆ ಕೊಡಬೇಕು?  ಎಂ.ಬಿ ‌ಪಾಟೀಲ್ ಎಲ್ಲಾ ಗೊಂದಲಗಳನ್ನ ನಿವಾರಣೆ ಮಾಡಿದ್ದಾರೆ. ಈಗ ಯಾವುದೇ ಗೊಂದಲ‌ ಇಲ್ಲ. ರೈತರ ಭೂಮಿಯನ್ನು ವಕ್ಫ್ ಆಸ್ತಿಯನ್ನಾಗಿ ಪರಿವರ್ತಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ. ತಪ್ಪಿದಲ್ಲಿ ಅದನ್ನು ಸರಿಪಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ