ರಾಜ್ಯಪಾಲ ವಜೂಭಾಯಿ ವಾಲಾ ಕಾರ್ಯವೈಖರಿಯ ಬಗ್ಗೆ ತನಿಖೆಯಾಗಲಿ: ಕುಮಾರಸ್ವಾಮಿ

ಸೋಮವಾರ, 23 ಮೇ 2016 (16:21 IST)
ರಾಜ್ಯಪಾಲ ವಜೂಭಾಯಿ ವಾಲಾ ಅವರ ಕಾರ್ಯವೈಖರಿ ಕುರಿತು ಅನುಮಾನ ವ್ಯಕ್ತಪಡಿಸಿದ್ದು, ಅವರ ಕಾರ್ಯವೈಖರಿಯ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಜೆಡಿಎಸ್‌ ರಾಜ್ಯಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ರಾಜ್ಯಪಾಲ ವಜೂಭಾಯಿ ವಾಲಾ ಅವರು ಪ್ರತಿವಾರ ಗುಜರಾತ್ ರಾಜ್ಯಕ್ಕೆ ಏಕೆ ತೆರಳುತ್ತಾರೆ? ಅವರು ಹೋಗುವಾಗ ಏನು ಕೊಂಡೊಯುತ್ತಾರೆ. ಅಲ್ಲಿಂದ ಮರಳಿ ಬರುವಾಗ ಸ್ವೀಟ್ ತರುತ್ತಾರೆ ಎಂದು ರಾಜ್ಯಪಾಲರ ಮೇಲೆ ಶಂಕೆ ವ್ಯಕ್ತಪಡಿಸಿದ್ದು, ಅವರ ವ್ಯವಹಾರದ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
 
ಈ ಬಾರಿ ಕನ್ನಡಿಗರೊಬ್ಬರು ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಬೇಕಾಗಿದೆ. ನಾವೇನು ಹಣವಿರುವವರನ್ನು ಆಯ್ಕೆ ಮಾಡಿಲ್ಲ. ಈ ಹಿಂದೆ ರಾಜಶೇಖರ ಮೂರ್ತಿ ಮತ್ತು ಚಿಕ್ಕಮಾದು ಅವರನ್ನು ಆಯ್ಕೆ ಮಾಡಿ ಕಳುಹಿಸಿದ್ದೆವು. ಕೆಲವೊಂದು ಬಾರಿ ಅನಿವಾರ್ಯವಾಗಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಜೆಡಿಎಸ್‌ ರಾಜ್ಯಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ