ಇಂದು ಬೆಳ್ಳಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾನೂನಿನ ಅಡಿಯಲ್ಲಿ ಗುತ್ತಿಗೆ ಮುಗಿದಿರುವ ಆಸ್ತಿಯನ್ನು ವಶಕ್ಕೆ ತೆಗೆದುಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಮಹದೇವಪುರ ಹಾಗೂ ಬೆಂಗಳೂರು ಪೂರ್ವ ವಲಯದಲ್ಲಿ ಪಾಸಿಟಿವ್ ಕೇಸ್ ಗಳು ಹೆಚ್ಚಳ ವಾಗುತ್ತಿದೆ. ಆ ಪ್ರದೇಶಗಳಲ್ಲಿ ಮನೆ ಮನೆಗೆ ತೆರಳಿ ಸರ್ವೆ ಮಾಡಿ ಹೋಮ್ ಐಸೋಲೇಶನ್ ಹಾಗೂ ಕಂಟೋನ್ಮೆಂಟ್ ಮಾಡಲಾಗುವುದು.ಆ ಎರಡು ವಲಯಗಳಲ್ಲಿ ಟೆಸ್ಟಿಂಗ್ ಸಂಖ್ಯೆಯನ್ನು ಹೆಚ್ಚಿಸುತ್ತಿದ್ದೇವೆ ಪ್ರತಿ ದಿನ ಬೆಂಗಳೂರಿನಲ್ಲಿ 500 - 600 ಕೇಸ್ ಗಳು ಕಾಣಿಸಿಕೊಳ್ಳುತ್ತಿದೆ ಆರ್ಟಿಪಿಸಿಆರ್ ಟೆಸ್ಟಿಂಗ್ ಅನ್ನು ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದರು.