ಗೋ ಹತ್ಯೆ ನಿಷೇಧ ಬಗ್ಗೆ ಸರ್ಕಾರದಿಂದ ಸಮೀಕ್ಷೆ: ಸತೀಶ್ ಜಾರಕಿಹೊಳಿ

ಗುರುವಾರ, 8 ಜೂನ್ 2023 (09:31 IST)
ಬೆಳಗಾವಿ : ಗೋ ಹತ್ಯೆ ನಿಷೇಧ ಕಾಯ್ದೆ ಬಗ್ಗೆ ಸರ್ಕಾರದಿಂದ ಸಮೀಕ್ಷೆ ನಡೆಸುವುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.
 
ಗೋ ಹತ್ಯೆ ನಿಷೇಧ ಕಾಯ್ದೆ ವಿಚಾರದ ಕುರಿತು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮನೆ-ಮನೆಗಳಿಗೆ ತೆರಳಿ ಗೋ ಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ಕುರಿತು ಸಂದರ್ಶನ ನಡೆಸುತ್ತೇವೆ.

ಮನೆ ಮನೆಗೆ ಹೋಗಿ ಈ ಕಾಯ್ದೆ ಬೇಕೋ ಬೇಡವೋ ಎಂದು ಜನರನ್ನು ಕೇಳುತ್ತೇವೆ. ಬಹುಮತದ ಆಧಾರದ ಮೇಲೆ ಗೋಹತ್ಯೆ ಕಾಯ್ದೆ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ