ಕೋವಿಡ್ ಹಗರಣದ ತನಿಖೆ ನಡೆಸಲು ಎಸ್‌ಐಟಿ ರಚನೆಗೆ ಸರ್ಕಾರ ಅಸ್ತು

Sampriya

ಗುರುವಾರ, 14 ನವೆಂಬರ್ 2024 (17:02 IST)
Photo Courtesy X
ಬೆಂಗಳೂರು: ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂಪಾಯಿ ಕೋವಿಡ್ ಹಗರಣದ ತನಿಖೆಯನ್ನು ನಡೆಸಲು ವಿಶೇಷ ತನಿಖಾ ತಂಡ(ಎಸ್ಐಟಿ) ರಚನೆ ಮಾಡಲು ರಾಜ್ಯ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ.

ಇಂದು ಸಿಎಂ ಸಿದ್ದರಾಮಯ್ಯ  ನೇತೃ‌ತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ಮಾತನಾಡಿ, ಕೋವಿಡ್ ಹಗರಣ ಸಂಬಂಧ ರಾಜ್ಯ ಸರ್ಕಾರ ನೇಮಿಸಿದ್ದ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿ ನೀಡಿದ್ದು, ಈ ಕುರಿತು ತನಿಖೆಗೆ ಎಸ್​ಐಟಿ ರಚನೆ ಮಾಡಲಾಗುವುದು. ವರದಿ ಆಧರಿಸಿ ಎಸ್ಐಟಿ ತನಿಖೆ ಆಗಲಿದೆ ಎಂದು ಮಾಹಿತಿ ನೀಡಿದರು.

ಕೋವಿಡ್‌ ಹಗರಣ ಸಂಬಂಧ ಹಲವು ದೂರುಗಳು ದಾಖಲಾಗಿದ್ದವು.  ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ ಎಂದು ಆರೋಪಗಳು ಕೇಳಿಬಂದಿದೆ. ಈ ಕುರಿತು ಸಮಗ್ರ ತನಿಖೆಗೆ ಎಸ್ಐಟಿ ರಚನೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅಗತ್ಯ ಬಿದ್ದರೆ ಎಫ್‌ಐಆರ್‌ ದಾಖಲಾಗುತ್ತೆ, ಚಾರ್ಜ್ ಶೀಟ್ ಕೂಡ ಹಾಕುತ್ತೇವೆ. ಯಾರ ವಿರುದ್ಧಎಫ್‌ಐಆರ್ ದಾಖಲಿಸಬೇಕೆಂದು ಎಸ್‌ಐಟಿ ನಿರ್ಧರಿಸುತ್ತದೆ ಎಂದು ಮಾಹಿತಿ ಹಂಚಿಕೊಂಡರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ