ಸಾರಿಗೆ ನೌಕರರ ವೇತನ ಪರಿಷ್ಕರಣೆ ಸಾಧ್ಯವಿಲ್ಲ: ರಾಮಲಿಂಗಾರೆಡ್ಡಿ

ಸೋಮವಾರ, 25 ಜುಲೈ 2016 (09:42 IST)
ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ಸದ್ಯದ ಮಟ್ಟಿಗೆ ರಾಜ್ಯ ಸರಕಾರದಿಂದ ವೇತನ ಪರಿಷ್ಕರಣೆ ಸಾಧ್ಯವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ನೌಕರರ ಸಂಘದೊಂದಿಗೆ 6 ಬಾರಿ ಸಭೆ ಮಾಡಿದ್ದೇವೆ. ನೌಕರ ಸಂಘಟನೆಗಳು 30 ಪ್ರತಿಶತ ವೇತನ ಹೆಚ್ಚಳಕ್ಕೆ ಪಟ್ಟು ಹಿಡಿದಿವೆ. ಆದರೆ, ಸದ್ಯದ ಮಟ್ಟಿಗೆ ರಾಜ್ಯ ಸರಕಾರದಿಂದ ವೇತನ ಪರಿಷ್ಕರಣೆ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
 
ರಾಜ್ಯ ಸಾರಿಗೆ ನೌಕರರು ಹಾಸಿಗೆ ಇದಷ್ಟು ಕಾಲು ಚಾಚಬೇಕು. ಬೇರೆ ರಾಜ್ಯಗಳಂತೆ ನಾವು ಕಡಿಮೆ ವೇತನ ನೀಡುತ್ತಿಲ್ಲ. 4 ವರ್ಷಗಳ ಹಿಂದೆ ನೌಕರರು ಪ್ರತಿಭಟನೆ ನಡೆಸಿದ್ದಾಗ ಕೂಡಾ ಹೀಗೆ ಆಗಿತ್ತು. ಸಾರಿಗೆ ನೌಕರರ ಬೇಡಿಕೆ ನ್ಯಾಯಯುತವಾಗಿಲ್ಲ ಎಂದು ತಿಳಿಸಿದರು.
 
ಸಾರಿಗೆ ಸಂಸ್ಥೆ ನೌಕರ ಅನಿರ್ದಿಷ್ಟಾವಧಿ ಮುಷ್ಕರದಿಂದ ಸರಕಾರ ಹಾಗೂ ಸಾರಿಗೆ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ. ಈ ಕುರಿತು ಸಾರಿಗೆ ಸಂಘಟನೆಗಳೊಂದಿಗೆ ಇನ್ನೊಂದು ಸುತ್ತಿನ ಸಂದಾನ ಸಭೆ ನಡೆಸುತ್ತೇನೆ ಎಂದು ತಿಳಿಸಿದರು.
 
ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ಖಾಸಗಿ ಸಾರಿಗೆ ಬಸ್ ಹಾಗೂ ಆಟೋಗಳ ಜನರಿಂದ ಹೆಚ್ಚು ಹಣ ಸುಲಿಗೆ ಮಾಡಿದರೇ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ