ಮೊಮ್ಮಗ ಪ್ರಜ್ವಲ್‌ನನ್ನು ದೇವೇಗೌಡರೇ ವಿದೇಶಕ್ಕೆ ಕಳುಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ ಆರೋಪ

Sampriya

ಬುಧವಾರ, 1 ಮೇ 2024 (15:05 IST)
ಯಾದಗಿರಿ: ಅಶ್ಲೀಲ ವಿಡಿಯೋ ಪ್ರಕರಣದ ವಿವಾದದ ನಡುವೆಯೇ ಜೆಡಿಎಸ್ ವರಿಷ್ಠ ದೇವೇಗೌಡರು ತಮ್ಮ ಮೊಮ್ಮಗ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರ ಗಂಭೀರ ಆರೋಪ ಮಾಡಿದ್ದಾರೆ.

ಯಾದಗಿರಿ ಜಿಲ್ಲೆಯ ದೇವತ್ಕಲ್ ಗ್ರಾಮದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಸಿದ್ದರಾಮಯ್ಯ ಅವರು,  ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಅವರದ್ದು ಎನಲ್ಲಾದ ಅಶ್ಲೀಲ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪ್ರಜ್ವಲ್ ವಿದೇಶಕ್ಕೆ ಹಾರಿದ್ದಾರೆ. ದೇವೇಗೌಡರೇ ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ವಿದೇಶಕ್ಕೆ ಕಳುಹಿಸಿದ್ದಾರೆ. ಅವರಿಗೆ ವೀಸಾ ಕೊಟ್ಟವರು ಬಿಜೆಪಿಯವರೇ ಎಂದು ಹೇಳಿದರು.

"ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣಕ್ಕೂ  ಡಿಸಿಎಂ ಡಿಕೆ ಶಿವಕುಮಾರ್ ಗೂ ಯಾವುದೇ ಸಂಬಂಧವಿಲ್ಲ. ಪೆನ್ ಡ್ರೈವ್ ಪ್ರಕರಣದ ಹಿಂದೆ ಡಿಕೆ ಶಿವಕುಮಾರ್ ಕೈವಾಡವಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಸರಿಯಲ್ಲ, ಪೆನ್ ಡ್ರೈವ್ ಕೊಟ್ಟಿದ್ದು ಬಿಜೆಪಿ ನಾಯಕ ಎಂದು ಪ್ರಜ್ವಲ್ ಡ್ರೈವರ್ ಕಾರ್ತಿ ಹೇಳಿದ್ದಾರೆ ಆದರೆ ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ರಾಜಕೀಯ ಆರೋಪ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಇದೆಲ್ಲ ಗೊತ್ತಿದ್ದೂ ಅಮಿತ್ ಶಾ ಅವರಿಗೆ ಟಿಕೆಟ್ ನೀಡಿದ್ದು ಏಕೆ, ಲೈಂಗಿಕ ಹಗರಣದ ಆರೋಪಿಗಳಿಗೆ ಟಿಕೆಟ್ ನೀಡಿದ್ದು ಏಕೆ? ಎಸ್‌ಐಟಿ ಪಾರದರ್ಶಕವಾಗಿ ತನಿಖೆ ನಡೆಸಲಿದೆ ಎಂದು ಅವರು ಹೇಳಿದರು.

ಇನ್ನೂ ರಾಜ್ಯದಲ್ಲಿ ಪೆನ್‌ಡ್ರೈವ್ ವಿಡಿಯೋ ವೈರಲ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದನ್ನು ಪ್ರಶ್ನಿಸಿದ ಕಾಂಗ್ರೆಸ್ ಪಕ್ಷದವರು ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನೆ ನಡೆಸುತ್ತಿದ್ದಾರೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜರ್ಮನಿಯಿಂದ ಭಾರತಕ್ಕೆ ಗಡಿಪಾರು ಮಾಡಬೇಕು ಮತ್ತು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ವಿದೇಶಾಂಗ ಸಚಿವರಿಗೆ ಪತ್ರ ಬರೆಯಬೇಕು ಎಂದು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾ ಸೋಮವಾರ ಒತ್ತಾಯಿಸಿದ್ದಾರೆ.

ಮಾಜಿ ಮನೆ ಕೆಲಸದಾಕೆ ಮಾಜಿ ಸಚಿವ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಏಪ್ರಿಲ್ 28 ರಂದು ಲೈಂಗಿಕ ಕಿರುಕುಳ ಪ್ರಕರಣವನ್ನು ದಾಖಲಿಸದ್ದರು.
ಅದರ ಅನ್ವಯ ಲೈಂಗಿಕ ಕಿರುಕುಳ, ಬೆದರಿಕೆ ಮತ್ತು ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪದ ಮೇಲೆ ಐಪಿಸಿಯ ಸೆಕ್ಷನ್ 354 ಎ, 354 ಡಿ, 506 ಮತ್ತು 509 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಜ್ವಲ್ ರೇವಣ್ಣ ಮತ್ತು ಆತನ ತಂದೆ ಹೆಚ್‌ಡಿ ರೇವಣ್ಣ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ರೇವಣ್ಣ ಅವರು ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ.

ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗೆ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಮಂಗಳವಾರದಂದು ಜೆಡಿಎಸ್ ಕೋರ್ ಕಮಿಟಿ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತುಗೊಳಿಸುವಂತೆ ಶಿಫಾರಸು ಮಾಡಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ