ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡಿದ್ದು ಅನುಕೂಲಕರ : ಬೊಮ್ಮಾಯಿ
ಬೆಂಗಳೂರಿನಿಂದ ಬ್ಯಾಡಗಿ ತಾಲೂಕಿನ ಶಿಡೇನೂರು ಗ್ರಾಮಕ್ಕೆ ಆಗಮಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಪ್ರಮುಖ ನೀರಾವರಿ ಯೋಜನೆಯಾಗಿದೆ.
ಮಧ್ಯ ಕರ್ನಾಟಕದ ಬರಗಾಲ ಪೀಡಿತ, ಬಿಸಿಲು ಪ್ರದೇಶದ ನಾಡಿಗೆ ಒಂದು ಲಕ್ಷಕ್ಕಿಂತ ಹೆಚ್ಚು ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ, ಕುಡಿಯುವ ನೀರಿನ ಮಹತ್ವದ ಯೋಜನೆ ಇದಾಗಿದ್ದು, ಇದರಿಂದ ಬಹಳ ಅನುಕೂಲವಾಗಲಿದೆ. ರಾಷ್ಟ್ರೀಯ ಯೋಜನೆಯಾಗಿ ಮಾಡುವಂತೆ ಮೊದಲೇ ಪ್ರಸ್ತಾವನೆ ಕಳಿಸಿದ್ದೆವು. ಹೀಗಾಗಿ 5,300 ಕೋಟಿ ರೂ. ನೀಡಿದ್ದು ಸ್ವಾಗತಾರ್ಹ ಎಂದರು.