ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಬೆಳಗಾವಿಯಲ್ಲಿ ಭರ್ಜರಿ ಸಿದ್ಧತೆ
ಫೆ.27ರಂದು ಬೆಳಗಾವಿ ನಗರದ ಸಿಪಿಎಡ್ ಮೈದಾನಕ್ಕೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಆಗಮನ ಬಿಜೆಪಿ ಪಕ್ಷದ ನಾಯಕರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಕುಂದಾನಗರಿ ಬೆಳಗಾವಿ ಸಜ್ಜಾಗುತ್ತಿದೆ.
ಬೆಳಗಾವಿಯಲ್ಲಿ 8 ಕಿಲೋಮೀಟರ್ ರೋಡ್ ಶೋಗೆ ಭರ್ಜರಿ ಸಿದ್ಧತೆ ನಡೆದಿದ್ದು, ರೋಡ್ ಶೋ ಮಾರ್ಗದಲ್ಲಿ ಸ್ವತಃಪಕ್ಷದ ಧ್ವಜ, ಬಂಟಿಂಗ್ಸ್ ಕಟ್ಟಿದ ಬಿಜೆಪಿ ಶಾಸಕ ಅಭಯ ಪಾಟೀಲ್ ರೋಡ್ ಶೋ ಮಾರ್ಗದ ರಸ್ತೆಯ ಎರಡು ಬದಿಗಳಲ್ಲಿ ಪಕ್ಷದ ಧ್ವಜ ಕಾರ್ಯಕರ್ತರು ಕಟ್ಟುತ್ತಿದ್ದಾರೆ. 8 ಕಿಲೋಮೀಟರ್ ರೋಡ್ ಶೋ ಉದ್ದಕ್ಕೂ ರಸ್ತೆಯ ಎರಡು ಬದಿಯಲ್ಲಿ ಬ್ಯಾರಿಕೇಡ್ ಅವಳವಡಿಕೆ ಮಾಡಲಾಗುತ್ತಿದೆ.