ಬೆಂಗಳೂರು ಕಡ್ಲೆಕಾಯಿ ಪರಸೆಗೆ ಗ್ರೀನ್ ಸಿಗ್ನಲ್
ಬಸವನಗುಡಿಯಲ್ಲಿ ನಡೆಯುವ ಕಡಲೆಕಾಯಿ ಪರಿಷೆಗೆ ಬಿಬಿಎಂಪಿ ಅನುಮತಿ ನೀಡಿದೆ. ನವೆಂಬರ್ 29ರಿಂದ ಮೂರು ದಿನಗಳ ಕಾಲ ಪರಿಷೆ ನಡೆಯಲಿದೆ. ಕೋವಿಡ್ ಮಾರ್ಗಸೂಚಿ ಅನ್ವಯ ಪರಿಷೆ ನಡೆಸಲು ಸೂಚನೆ ನೀಡಲಾಗಿದೆ.. ಕಳೆದ ವರ್ಷ ಕೋವಿಡ್ ಕಾರಣದಿಂದಾಗಿ ದೇವಸ್ಥಾನದ ಆವರಣದಲ್ಲಿ ಮಾತ್ರ ನಡೆಸಲು ಅನುಮತಿ ನೀಡಲಾಗಿತ್ತು.ಪ್ರತಿ ವರ್ಷ ಕಾರ್ತಿಕ ಮಾಸದ ಕೊನೆಯ ಸೋಮವಾರದಂದು ಬಸವನಗುಡಿ ಕಡಲೆ ಕೈ ಪರಿಷೆ ನಡೆಯುತ್ತದೆ. ಇದು ಸಾಮಾನ್ಯವಾಗಿ ನವೆಂಬರ್ ಕೊನೆಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬರುತ್ತದೆ