ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ಸಂಘ ಪರಿವಾರದ ನಾಯಕರಿಂದ ಗ್ರೀನ್ ಸಿಗ್ನಲ್!

ಶನಿವಾರ, 27 ಆಗಸ್ಟ್ 2016 (09:49 IST)
ರಾಜ್ಯದಲ್ಲಿ ಹಿಂದ ಸಮುದಾಯಗಳನ್ನು ಒಗ್ಗೂಡಿಸಿ ಭಾರತೀಯ ಜನತಾ ಪಾರ್ಟಿಯನ್ನು ಮರಳಿ ಅಧಿಕಾರಕ್ಕೆ ತರುವ ಉದ್ದೇಶದಿಂದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಸ್ಥಾಪಿಸಲು ಹೊರಟಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ಸಂಘ ಪರಿವಾರದ ನಾಯಕರು ಹಸಿರು ನಿಶಾನೆ ತೊರಿದ್ದಾರೆ. 
 
ಅಗಸ್ಟ್ 31ರಂದು ಕೂಡಲ ಸಂಗಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಪೂರ್ವಭಾವಿ ಸಭೆ ನಡೆಯಲಿದ್ದು, ಪೂರ್ವಭಾವಿ ಸಭೆಗೆ ರಾಜ್ಯದ ಎಲ್ಲ ಭಾಗಗಳಿಂದ ಆಗಮಿಸಲಿರುವ ನಾಯಕರು ಬ್ರಿಗೇಡ್‌ನ ರೂಪುರೇಷಗಳ ಕುರಿತು ಚರ್ಚಿಸಲಿದ್ದಾರೆ.
 
ಹಿಂದುಳಿದ ಹಾಗೂ ದಲಿತ ಸಮುದಾಯಗಳನ್ನು ಒಂದುಗೊಡಿಸಿ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಆರಂಭವಾಗುತ್ತಿರುವ ಬ್ರಿಗೇಡ್‌‌ಗೆ ಸಮ್ಮತಿ ನೀಡಿರುವ ನಾಯಕರು, ಈ ಪ್ರಯತ್ನಕ್ಕೆ ಬೆಂಬಲ ನೀಡುವಂತೆ ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
 
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ನೇತೃತ್ವದಲ್ಲಿ ಸೆಪ್ಟೆಂಬರ್ 1 ರಂದು ಹಾವೇರಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶ ನಡೆಯಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ