49 ಹೊಸ ತಾಲೂಕುಗಳ ರಚನೆಗೆ ಗ್ರೀನ್ ಸಿಗ್ನಲ್: ಸಚಿವ ಜಯಚಂದ್ರ
ಸೋಮವಾರ, 28 ಆಗಸ್ಟ್ 2017 (20:49 IST)
49 ಹೊಸ ತಾಲೂಕುಗಳ ರಚನೆಗೆ ರಾಜ್ಯ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ ಎಂದು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮೂರು ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕೆ ಕೂಡಾ ಸಂಪುಟ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಅಂದಾಜು 140 ಕೋಟಿ ರೂಪಾಯಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯವಾಗಿರುವ ಕೆಲವು ಮಹತ್ವದ ಯೋಜನೆಗಳಿಗೆ ಸಂಪುಟ ಸಮ್ಮತಿ ಸೂಚಿಸಿದೆ ಎಂದರು.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವಾರು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.