ಟ್ವೀಟ್ ಮೂಲಕ ಗೃಹ ಲಕ್ಷ್ಮಿ ಎಲ್ಲ ಗೊಂದಲಗಳಿಗೆ ತೆರೆ ಎಳೆದ ಸಚಿವೆ
ಗುರುವಾರ, 27 ಜುಲೈ 2023 (18:30 IST)
ಗೃಹ ಲಕ್ಷ್ಮೀ ಯೋಜನೆ ಜಾರಿಗೆ ಬಂದಾಗಿನಿಂದ ಸಾಕಷ್ಟು ಗೊಂದಲಗಳು ಎದುರಾಗಿದ್ದವು, ಮೊದಲು ಅರ್ಹ ಫಲಾನುಭವಿಗಳ ಮೊಬೈಲ್ ಸಂಖ್ಯೆಗೆ ಮೆಸೇಜ್ ಬಂದರಷ್ಟೇ ನೋಂದಣಿ ಕೇಂದ್ರಗಳಿಗೆ ತೆರಳಬೇಕಿತ್ತು. ಮೇಸೆಜ್ ಬಂದಮೇಲು ಸೇವಾ ಕೆಂದ್ರಕ್ಕೆ ಹೊದರು ಕೂಡ ಸರಿಯಾದ ಸಮಯಕ್ಕೆ ಕೆಲಸ ಆಗುತ್ತಿರಲಿಲ್ಲ. ಇನ್ನು ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಬಂದ ಮಹಿಳೆಯರ ಬಳಿ ಹಣ ಪಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು ಹೀಗಾಗಿ ಸರ್ಕಾರ ಎಚ್ಚೆತ್ತು ಕೊಂಡಿದ್ದಾರೆ, ಇನ್ನು ಮುಂದೆ ಮಹಿಳೆಯರು ಯಾವುದೇ ನೋಂದಣಿ ಮಾಡಿಕೊಳ್ಳದೆ ದಾಖಲೆಗಳೊಂದಿಗೆ ನೇರವಾಗಿ ಹತ್ತಿರದಲ್ಲಿರುವ ನೋಂದಣಿ ಕೇಂದ್ರಗಳಿಗೆ ತೆರಳಿ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸ್ವತಹ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೀಲಿಸಿದ್ದಾರೆ.
ಇನ್ನೂ ಟ್ವಿಟ್ಟರ್ನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ಅರ್ಹ ಫಲಾನುಭವಿಗಳು ಅಗತ್ಯವಿರುವ ದಾಖಲೆಗಳೊಂದಿಗೆ ಹತ್ತಿರದಲ್ಲಿರುವ ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸಬಹುದು, ಯಾರು ಕೂಡ ಮೇಸೆಜ್ ಬಂದಿಲ್ಲ ಎಂದು ಕಾಯುವ ಅವಶಕತೆ ಇಲ್ಲ ಎಂದು ತೀಳಿಸಿದ್ದಾರೆ.ಇನ್ನೂ ಯೋಜನೆಗೆ ಚಾಲನೆ ಸಿಕ್ಕ 7 ದಿನಗಳಲ್ಲೇ 50 ಲಕ್ಷಕ್ಕೂ ಅಧಿಕ ಫಲಾನುಭವಿಗಳು ತಮ್ಮ ಹೆಸರು ನೋಂದಾಯಿಸಿಕೊಂಡಿರುವುದು ಖುಷಿ ತಂದಿದೆ, ಇದಲ್ಲದೇ ಗೃಹಲಕ್ಷ್ಮಿ ನೋಂದಣಿಗೆ ಹಣ ಪಡೆದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು. ಸೇವಾ ಕೇಂದ್ರಗಳಲ್ಲಿ ಅಸಡ್ಡೆ ತೋರಿದರೆ ಅಂತಹವರ ವಿರುದ್ಧವೂ ಸಹ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಟ್ವೀಟ್ ಮಾಡಿ ತೀಳಿಸಿದ್ದಾರೆ.