ಗೃಹ ಲಕ್ಷ್ಮಿ ಯೋಜನೆ ನೊಂದಣಿ ಸ್ಥಗಿತ ಮಹಿಳೆಯರಿಗೆ ಶಾಕ್..!

ಗುರುವಾರ, 7 ಸೆಪ್ಟಂಬರ್ 2023 (21:05 IST)
ರಾಜ್ಯದಲ್ಲಿ ಮಹಿಳೆಯರಿಗೆ 2000 ರೂ. ಸಹಾಯಧನ ನೀಡುವ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಸ್ಥಗಿತಗೊಳಿಸಿದೆ.ಗೃಹಲಕ್ಷ್ಮಿ ಯೋಜನೆ ಬಗ್ಗೆ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಸರ್ಕಾರವು ಇದುವರೆಗೆ ನೋಂದಾಯಿತ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ರೂ.2000 ಹಣ ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಗೊಂದಲ ಆಗದಿರಲೆಂದು 'ಗೃಹ ಲಕ್ಷ್ಮಿ ಯೋಜನೆ'ಯ ಹೊಸ ನೋಂದಣಿ ತಾತ್ಕಾಲಿಕ ಸ್ಥಗಿತಗೊಂಡಿದೆ. ನೋಂದಣಿಯಾದ ಎಲ್ಲಾ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಜಮಾಗೊಂಡ ಬಳಿಕ ನೋಂದಣಿ ಪ್ರಕ್ರಿಯೆ ಪುನರಾರಂಭಗೊಳ್ಳಲಿದೆ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಲು ಶೀಘ್ರವೇ ಅವಕಾಶ ಮಾಡಿಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1902 ಕ್ಕೆ ಕರೆಮಾಡಿ ಎಂದು ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ