ಆಗಸ್ಟ್‌ನಲ್ಲಿ ಫಲಾನುಭವಿಗಳ ಖಾತೆಗೆ ʻಗೃಹಲಕ್ಷ್ಮಿʼ : ಲಕ್ಷ್ಮಿ ಹೆಬ್ಬಾಳ್ಕರ್ `

ಶನಿವಾರ, 15 ಜುಲೈ 2023 (09:40 IST)
ಬೆಂಗಳೂರು : ಮುಂದಿನ ಆಗಸ್ಟ್ ತಿಂಗಳಲ್ಲೇ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ 2 ಸಾವಿರ ರೂ. ಹಾಕೋದು ಖಚಿತ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
 
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಹೇಮಲತಾ ನಾಯಕ್ ಅವರು ಗೃಹಲಕ್ಷ್ಮಿ ಯೋಜನೆ ಕುರಿತು ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಆಗಸ್ಟ್ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ 2 ಸಾವಿರ ರೂ. ಜಮೆ ಮಾಡಲಾಗುತ್ತದೆ ಅಂತ ಭರವಸೆ ನೀಡಿದರು.

ಗೃಹಲಕ್ಷ್ಮಿ ಯೋಜನೆಗೆ 30 ಸಾವಿರ ಕೋಟಿ ಹಣ ಬೇಕೆಂದು ಅಂದಾಜಿಸಲಾಗಿದೆ. 2023-24ರ ಬಜೆಟ್ನಲ್ಲಿ ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು 17,500 ಕೋಟಿ ಅನುದಾನ ಒದಗಿಸಿದ್ದಾರೆ ಎಂದು ವಿವರಿಸಿದರು.

ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆ ನಾವು ಪ್ರಾರಂಭ ಮಾಡಿಲ್ಲ, ಹಾಗಾಗಿ ಸರ್ವರ್ ಸಮಸ್ಯೆ ವಿಷಯವೇ ಬರೋದಿಲ್ಲ. ಆ್ಯಪ್ ಕೂಡಾ ಬಿಡುಗಡೆ ಆಗಿಲ್ಲ. 2-3 ದಿನಗಳಲ್ಲಿ ಸುದ್ದಿಗೋಷ್ಠಿ ಮಾಡಿ ಅರ್ಜಿ ಸಲ್ಲಿಕೆಗೆ ದಿನಾಂಕ ಘೋಷಣೆ ಮಾಡ್ತೀವಿ. ಅಂದೇ ಆ್ಯಪ್ ಕೂಡ ರಿಲೀಸ್ ಮಾಡ್ತೀವಿ ಎಂದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ