ಜನತೆಗೆ ಗೃಹಲಕ್ಷ್ಮಿ ಯೋಜನೆಯಿಂದ ನೆಮ್ಮದಿ: ಶರಣಬಸಪ್ಪಗೌಡ ದರ್ಶಾನಾಪುರ

ಗುರುವಾರ, 31 ಆಗಸ್ಟ್ 2023 (11:11 IST)
ಯಾದಗಿರಿ : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಯಾದಗಿರಿಯಲ್ಲಿ ಚಾಲನೆ ನೀಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶಾನಾಪುರ ಅವರು ದೀಪ ಬೆಳಗಿಸುವ ಮೂಲಕ ಯೋಜನೆಗೆ ಚಾಲನೆ ನೀಡಿದರು. ಯಾದಗಿರಿ ನಗರದ ಜಿಲ್ಲಾಡಳಿತ ಸಭಾ ಭವನದಲ್ಲಿ ಕಾರ್ಯಕ್ರಮ ನಡೆಸಲಾಯಿತು.

ಈ ವೇಳೆ ಜಿಲ್ಲಾಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಮಾತನಾಡಿ, ಕಾಂಗ್ರೆಸ್ ಚುನಾವಣೆ ಸಂದರ್ಭದಲ್ಲಿ ನೀಡಿರುವ ಭರವಸೆಯಂತೆ ಐದು ಗ್ಯಾರಂಟಿ ಯೋಜನೆ ಜಾರಿಗೆ ತರಲಾಗಿದೆ. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ