ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಊರಿಗೆ ಗ್ರಂಥಾಲಯ ಕಟ್ಟಿಸಿದ ಮಹಿಳೆ

Sampriya

ಭಾನುವಾರ, 13 ಅಕ್ಟೋಬರ್ 2024 (17:10 IST)
Photo Courtesy X
ಬೆಳಗಾವಿ: ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ತನ್ನ ಊರಿಗೆ ಹೋಳಿಗೆಯೂಟ, ಸೊಸೆಯ ಜೀವನಕ್ಕೆ ಫ್ಯಾನ್ಸಿ ಶಾಪ್ ಹಾಗೂ ಮಗನಿಗೆ ಬೈಕ್‌ ಅನ್ನು ಉಡುಗೊರೆಯಾಗಿ ಕೊಟ್ಟಿದ್ದು ನಾವೆಲ್ಲ ಕೇಳಿದ್ದೇವೆ.

ಆದರೆ ಬೆಳಗಾವಿಯ ರಾಯಭಾಗ ತಾಲ್ಲೂಕಿನ ಮಂಟೂರು ಗ್ರಾಮದ ಮಹಿಳೆಯೊಬ್ಬರು ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ನಿರ್ಮಾಣ ಮಾಡಿ ಸುದ್ದಿಯಾಗಿದ್ದಾರೆ.

ಗ್ರಾಮದ ಪಂಚಾಯಿತಿಯ ಮಲ್ಲವ್ವ ಭೀಮಪ್ಪ ಮೇಟಿ ಮಹಿಳೆ ಇದೀಗ ಭವಿಷ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಆಕಾಂಕ್ಷಿಗಳಿಗೆ ಸಹಾಯವಾಗಲೆಂದು ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ.

ಈ ಬಗ್ಗೆ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಫೋಸ್ಟ್ ಹಂಚಿಕೊಂಡಿದ್ದಾರೆ. ಇದನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಡೆವಲಪ್‌ಮೆಂಟ್‌ ಕಮೀಷನರ್ ಉಮಾ ಮಹದೇವನ್ ದಾಸ್‌ಗುಪ್ ಹಾಗೂ ಸಿಎಂ ಸಿದ್ದರಾಮಯ್ಯಗೆ ಅವರು ಟ್ಯಾಗ್ ಮಾಡಿದ್ದಾರೆ.

ಮಂಟೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾಗಿರುವ ಮಲ್ಲವ್ವ ಅವರ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ