ಗೃಹಲಕ್ಷ್ಮಿ ಯೋಜನೆ :70 ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ

ಗುರುವಾರ, 27 ಜುಲೈ 2023 (09:38 IST)
ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಯೋಜನೆಗೆ ಅಧಿಕೃತ ಚಾಲನೆ ಸಿಕ್ಕ ಬಳಿಕ ಒಂದು ವಾರದಲ್ಲೇ 70 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಹೆಸರು ನೋಂದಾಯಿಸಿದ್ದಾರೆ.
 
ಆರಂಭದಲ್ಲಿ ಫಲಾನುಭವಿಗಳು ತಮ್ಮ ಮೊಬೈಲ್ಗೆ ಸಂದೇಶ ಬಂದ ನಂತರ ನೋಂದಣಿ ಕೇಂದ್ರಗಳಿಗೆ ಹೋಗಿ ನೋಂದಾಯಿಸಿಕೊಳ್ಳಬೇಕಿತ್ತು. ಈಗ ನೋಂದಣಿ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಲಾಗಿದೆ. ಮೊಬೈಲ್ಗೆ ಮೆಸೇಜ್ ಬರದೇ ಇದ್ದರೂ ಅರ್ಹ ಫಲಾನುಭವಿಗಳು ಇನ್ಮುಂದೆ ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ನೋಂದಣಿ ಕೇಂದ್ರದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಇದುವರೆಗೂ ಮೆಸೇಜ್ ಬಂದರಷ್ಟೇ ಬೆಂಗಳೂರು ಒನ್, ಗ್ರಾಮ ಒನ್ಗಳಲ್ಲಿ ಅರ್ಜಿ ಸಲ್ಲಿಸಬೇಕಿತ್ತು. ಆದರೆ SMS ಲಭಿಸದೇ ಇದ್ದರೂ ದಾಖಲಾತಿಯೊಂದಿಗೆ ನೇರವಾಗಿ ಹೋಗಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಸಚಿವಾಲಯ ತಿಳಿಸಿದೆ.

ಈ ನಡುವೆ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಕೆಲವು ಕೇಂದ್ರಗಳಲ್ಲಿ ಹಣ ಪಡೆಯುತ್ತಿದ್ದ ಬಗ್ಗೆ ದೂರು ಬಂದಿತ್ತು. ಗೃಹಲಕ್ಷ್ಮಿ ನೋಂದಣಿಗೆ ಹಣ ಪಡೆದರೆ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆಯನ್ನು ಸರ್ಕಾರ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ