ಎರಡು ತಿಂಗಳಿನಿಂದ ಯಜಮಾನಿ ಖಾತೆಗೆ ಬಾರದ ಗೃಹಲಕ್ಷ್ಮೀ, ಏನಂದ್ರು ಲಕ್ಷ್ಮೀ ಹೆಬ್ಬಾಳ್ಕರ್

Sampriya

ಬುಧವಾರ, 24 ಜುಲೈ 2024 (15:26 IST)
ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆಯ 2 ತಿಂಗಳ ಬಾಕಿ ಹಣ 10 ದಿನಗಳ ಒಳಗಾಗಿ ಫಲಾನುಭವಿಗಳ ಖಾತೆಗೆ ಹಾಕಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.

ಈ ಯೋಜನೆಯನ್ನು ಮಹಿಳೆಯ ಆರ್ಥಿಕ ಸಬಲೀಕರಣಕ್ಕಾಗಿ ಕೊಡಲಾಗುತ್ತಿದೆ. ಚುನಾವಣೆ ಪೂರ್ಣದಲ್ಲೇ ರಾಜ್ಯದ ಮಹಿಳೆಯರಿಗೆ ಈ ಭರವಸೆ ನೀಡಲಾಗಿತ್ತು. ಹಾಗಾಗಿ ಯಾವುದೇ ಕಾರಣಕ್ಕೂ ಗೃಹ ಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವುದಿಲ್ಲ. ಸದ್ಯ ತಾಂತ್ರಿಕ ದೋಷದಿಂದ ಇದೀಗ ತಡವಾಗಿದೆ. ಈಗಾಗಲೇ ಹಣವನ್ನು ಡಿಪಿಟಿಗೆ ಫುಶ್ ಮಾಡಿದ್ದೇವೆ. ಕೆಲವೇ ದಿನಗಳಲ್ಲಿ ಮಹಿಳೆಯರ ಖಾತೆಗೆ ಜಮೆ ಆಗಲಿದೆ ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೇಲೆ ಜಾರಿಗೆ ತಂದಿರುವ  ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ಮೇ ತಿಂಗಳವರೆಗೆ ಸರಿಯಾಗಿ ಜಮಾ ಆಗುತ್ತಿತ್ತು.

ಆದರೆ ಮೇ ತಿಂಗಳ ಬಳಿಕ ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ಬಂದಿಲ್ಲ.  ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್​ ಸರ್ಕಾರ ಗ್ಯಾರಂಟಿ ಯೋಜನೆಗಳ ಮೇಲೆ ಆಸಕ್ತಿ ವಹಿಸುತ್ತಿಲ್ಲ ಎಂಬ ಆಗಾಗ ಆರೋಪ ಕೇಳಿಬಂದಿತ್ತು. ಇದೀಗ ಈ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರತಿಕ್ರಿಯಿಸಿ 2ತಿಂಗಳ ಬಾಕಿ ಹಣವನ್ನು 10ದಿನಗಳೊಳಗೆ ಫಲಾನುಭವಿಗಳ ಖಾತೆಗೆ ಹಾಕಲಾಗುವುದು ಎಂದು ಭರವಸೆ ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ