ಜಿಎಸ್‌ಟಿ ಮಸೂದೆ: ವಿಶೇಷ ಅಧಿವೇಶನ ರದ್ದು ಸಾಧ್ಯತೆ

ಶುಕ್ರವಾರ, 9 ಸೆಪ್ಟಂಬರ್ 2016 (16:01 IST)
ಜಿಎಸ್‌ಟಿ ಮಸೂದೆ ಅಂಗೀಕರಿಸಲು ಫೆಬ್ರವರಿ 14 ರಂದು ನಿಗದಿಯಾಗಿದ್ದ ವಿಶೇಷ ಅಧಿವೇಶನ ರದ್ದಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ
 
ನಾಳೆ ನಡೆಯಲಿರುವ ತುರ್ತುಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ರದ್ದುಗೊಳಿಸುವ ಕುರಿತಂತೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವರು ತಿಳಿಸಿದ್ದಾರೆ.
 
ಸಂಪುಟದಲ್ಲಿ ಜಿಎಸ್‌ಟಿ ಮಸೂದೆ ಅಂಗೀಕರಿಸಿದ್ರೆ ಸಾಕು ಎಂದು ಕಾನೂನು ತಜ್ಞರು ಸಲಹೆ ನೀಡಿದ್ದರಿಂದ ವಿಶೇಷ ಅಧಿವೇಶನ ರದ್ದುಗೊಳಿಸಲು ಸರಕಾರ ನಿರ್ಧರಿಸಿದೆ ಎನ್ನಲಾಗಿದೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಫೆಬ್ರವರಿ 14 ರಂದು ವಿಶೇಶ ಅಧಿವೇಶನ ಕರೆದು ಸಭೆಯಲ್ಲಿ ಜಿಎಸ್‌ಟಿ ಮಸೂದೆ ಅಂಗೀಕರಿಸುವ ತೀರ್ಮಾನ ತೆಗೆದುಕೊಂಡಿದ್ದರು. ಆದರೆ, ಜಿಎಸ್‌ಟಿ ಮಸೂದೆ ಅಂಗೀಕಾರಕ್ಕಾಗಿ ವಿಶೇಶ ಅಧಿವೇಶನ ಕರೆಯುವ ಅಗತ್ಯವಿಲ್ಲ ಎಂದು ತಜ್ಞರು ಸಲಹೆ ನೀಡಿದ್ದರಿಂದ ವಿಶೇಷ ಅಧಿವೇಶನ ರದ್ದಾಗುವ ಸಾಧ್ಯತೆಗಳಿವೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ