ಜಿಎಸ್ ಟಿ ವಿರುದ್ಧ ಹೆಚ್.ಡಿ.ಕೆ. ಹೇಳಿದ್ದೇನು ಗೊತ್ತಾ?
ಜಿಎಸ್ ಟಿ ಜಾರಿಯ ವಿರುದ್ಧ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಸಮಧಾನ ಹೊರಹಾಕಿದ್ದಾರೆ.
ಸರಕು ಮತ್ತು ಸೇವಾ ತೆರಿಗೆ ಜಾರಿಯ ವಿರುದ್ಧವಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಹಿಂದೂಸ್ತಾನ್ ಟೈಮ್ಸ್ ನ ನಾಯಕತ್ವ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಜಿಎಸ್ ಟಿ ಜಾರಿಯಿಂದಾಗಿ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗುತ್ತಿದೆ ಎಂದಿದ್ದಾರೆ.
ಜಿಎಸ್ಟಿ ಇಂದಾಗಿ ಎಲ್ಲಾ ರಾಜ್ಯಗಳ ಅಧಿಕಾರ ವ್ಯಾಪ್ತಿಗೆ ಕಡಿವಾಣ ಬಿದ್ದಂತಾಗಿದೆ. ಯಾವುದೇ ರಾಜ್ಯದಲ್ಲಿ ಅತಿವೃಷ್ಟಿ ಅಥವಾ ಅನಾವೃಷ್ಟಿ ಆದಾಗ ತೆರಿಗೆಗಳನ್ನು ಹೆಚ್ಚಿಸುವ ಅಥವಾ ಇಳಿಕೆ ಮಾಡುವ ಅಧಿಕಾರ ರಾಜ್ಯಗಳಿಗೆ ಇರಬೇಕು ಎಂದು ಸಿಎಂ ಹೇಳಿದ್ದಾರೆ.