ಮತ್ತೆ ಪ್ರಧಾನಿ ಮೋದಿಯ ಬಗ್ಗೆ ಮೆಚ್ಚುಗೆಯ ಮಾತನಾಡಿದ ಜಿ.ಟಿ ದೇವೇಗೌಡ

ಶುಕ್ರವಾರ, 30 ಆಗಸ್ಟ್ 2019 (11:58 IST)
ಮೈಸೂರು : ಮತ್ತೆ ಮಾಜಿ ಸಚಿವ ಜಿ.ಟಿ ದೇವೇಗೌಡ ಅವರು ಪ್ರಧಾನಿ ಮೋದಿ ಅವರನ್ನು ದೇಶದ ಮಹಾನ್ ವ್ಯಕ್ತಿ ಎಂದು ಹಾಡಿಹೊಗಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಈ ದೇಶಕ್ಕೆ ಬೇಕು ಎಂದು ನಾನು ಮೊದಲೇ ಹೇಳಿದ್ದೆ. ಅವರು ದೇಶದ ವ್ಯಕ್ತಿ ಹಾಗೂ ದೇಶದ ರಕ್ಷಣೆ ಮಾಡುತ್ತಿದ್ದಾರೆ. ಮೋದಿ ಅವರು ಕಾಶ್ಮೀರ ಸಮಸ್ಯೆಯನ್ನು ಯಾವ ರೀತಿ ಮಾಡುತ್ತಿದ್ದಾರೆ ಎಂಬುದನ್ನು ನೋಡಿದ್ದೀರಿ. ಅವರು ದೇಶದ ಅಭಿವೃದ್ಧಿಯತ್ತ ನೋಡುತ್ತಿದ್ದಾರೆ. ಅವರ ಬಗ್ಗೆ ಒಳ್ಳೆಯ ಮಾತನಾಡಿದರೆ ಬಿಜೆಪಿ ಎಂದು ಹೇಳುತ್ತಾರೆ. ಆದರೆ ಮೋದಿ ಅವರು ಈ ದೇಶದ ವ್ಯಕ್ತಿ, ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಹೊಗಳಿದ್ದಾರೆ.


ಹಾಗೇ ಸಿಎಂ ಯಡಿಯೂರಪ್ಪ ಅವರು, ನಾನು 36 ಸಾವಿರ ಮತಗಳ ಅಂತರದಲ್ಲಿ ಗೆದ್ದು ಮಂತ್ರಿ ಸ್ಥಾನ ತೆಗೆದುಕೊಳ್ಳಲು ಒಂದು ತಿಂಗಳು ಮುನಿಸು ಕಟ್ಟಿಕೊಂಡಿದೆ. ಆದರೆ ಯಡಿಯೂರಪ್ಪ ಅವರು ನಾನು ಸೋತಾಗ ಮನೆಗೆ ಕರೆಸಿಕೊಂಡು ನೀನು ಆಗಬೇಕೆಂದು ಗೃಹ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟರು ಎಂದು ಹೇಳಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ